ಶ್ರೀನಗರ: ಜಮ್ಮು-ಕಾಶ್ಮೀರದ (Jammu And Kashmir) ಅನಂತ್‌ನಾಗ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ (Car Accident) ಐವರು ಮಕ್ಕಳು ಸೇರಿ ಒಂದೇ ಕುಟುಂಬದ 8 ಮಂದಿ ಸಾವನ್ನಪ್ಪಿರುವ ಘಟನೆ ನಡೆಸಿದೆ.
ಟಾಟಾ ಸುಮೋ ಕಾರೊಂದು ಕಮರಿಗೆ ಉರುಳಿದ್ದು, ಐವರು ಮಕ್ಕಳು ಸೇರಿ 8 ಮಂದಿ ದಾರುಣವಾಗಿ ಸಾವಿಗೀಡಾಗಿದ್ದಾರೆ. ಜಮ್ಮು-ಕಾಶ್ಮೀರದ ದಕ್ಸುಮ್ ಪ್ರದೇಶದಲ್ಲಿ ಕಾರು ನಿಯಂತ್ರಣ ತಪ್ಪಿ, ಕಮರಿಗೆ ಉರುಳಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ರಾಮನಗರ ಇತಿಹಾಸ ಅಳಿಸುವ ಕೆಲಸ: ನಿಖಿಲ್
ದಕ್ಸುಮ್ ಪ್ರದೇಶದಿಂದ ಸುಮಾರು 20 ಕಿಮೀ ದೂರದಲ್ಲಿರುವ ಆರ್ಶುನ್ ಹಟ್ ಎಂಬ ಪ್ರದೇಶದಲ್ಲಿ ಕಾರು ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿದೆ. ಕಾರು ಕಣಿವೆಗೆ ಉರುಳುತ್ತಲೇ ಅವರ ರಕ್ಷಣೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ. ಇನ್ನೂ ಕಾರನ್ನು ಮೇಲಕ್ಕೆ ಎತ್ತಿಲ್ಲ. ಶವಗಳನ್ನು ಕೂಡ ಮೇಲೆ ಎತ್ತುವ ಕಾರ್ಯಾಚರಣೆ ನಡೆಯುತ್ತಿದೆ. ಮೃತರ ಕುರಿತು ಕೂಡ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Paris Olympics 2024: ಭಾರತದ ಮನು ಭಾಕರ್ ಫೈನಲ್‌ಗೆ ಎಂಟ್ರಿ – 20 ವರ್ಷಗಳ ಬಳಿಕ ವಿಶೇಷ ಸಾಧನೆ!
ಜಮ್ಮು-ಕಾಶ್ಮೀರವು ಕಣಿವೆ ಪ್ರದೇಶವಾದ ಕಾರಣ ವಾಹನಗಳು ಹೆಚ್ಚಾಗಿ ಕಣಿವೆಗೆ ಉರುಳುತ್ತವೆ. ರಾಜೌರಿ ಜಿಲ್ಲೆಯಲ್ಲಿ ಕಳೆದ ಜೂನ್‌ನಲ್ಲಿ ಸೇನೆಯ ವಾಹನವೊಂದು ಕಂದಕಕ್ಕೆ ಉರಳಿ ಒಬ್ಬ ಯೋಧ ಮೃತಪಟ್ಟಿದ್ದರು ಹಾಗೆಯೇ, ನಾಲ್ವರು ಸೈನಿಕರು ಗಾಯಗೊಂಡಿದ್ದರು. ಗಾಯಗೊಂಡಿರುವ ಯೋಧರನ್ನು ಸೇನೆಯ ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ನೀಡಲಾಗಿತ್ತು. ಇದನ್ನೂ ಓದಿ: ನಾಯಿ ಸ್ವಲ್ಪ ಟಚ್ ಆದ್ರೂ ಮಸೀದಿಯೊಳಕ್ಕೆ ಹೋಗಲ್ಲ, ಅಂತಹದ್ದರಲ್ಲಿ ಮಾಂಸ ತರೋಕಾಗುತ್ತಾ? – ಅಬ್ದುಲ್ ರಜಾಕ್