ಮುಂಬೈ: ಮಹಾರಾಷ್ಟ್ರ ಸಂಪುಟ ಶನಿವಾರ ಔರಂಗಾಬಾದ್ ಅನ್ನು ಛತ್ರಪತಿ ಸಂಭಾಜಿ ನಗರ ಹಾಗೂ ಒಸ್ಮಾನಾಬಾದ್ ಅನ್ನು ಧಾರಾಶಿವ್ ಎಂದು ಮರುನಾಮಕರಣ ಮಾಡುವ ನಿರ್ಧಾರವನ್ನು ಅನುಮೋದಿಸಿದೆ.
ಔರಂಗಾಬಾದ್ ಹಾಗೂ ಒಸ್ಮಾನಾಬಾದ್ ನಗರಗಳ ಹೆಸರನ್ನು ಮರುನಾಮಕರಣಗೊಳಿಸಲು ಈ ಹಿಂದೆ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ(ಎಂವಿಎ) ಸರ್ಕಾರ ನಿರ್ಧರಿಸಿತ್ತು. ಆದರೆ ಅವರ ಸರ್ಕಾರ ಬಹುಮತ ಗಳಿಸದ ಕಾರಣ ನಿರ್ಧಾರ ಕಾನೂನಾತ್ಮಕವಾಗಿರಲಿಲ್ಲ. ಇದೀಗ ನಮ್ಮ ಸರ್ಕಾರ ಮರುನಾಮಕರಣ ಮಾಡಿದ್ದು, ಕಾನೂನಾತ್ಮಕವಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಿಳಿಸಿದ್ದಾರೆ. ಇದನ್ನೂ ಓದಿ: ದ್ರೌಪದಿ ಮುರ್ಮು ಗೌರವಿಸುತ್ತೇವೆ, ಸಿನ್ಹಾರನ್ನು ಬೆಂಬಲಿಸುತ್ತೇವೆ: ಎಎಪಿ
Advertisement
Advertisement
ಉದ್ಧವ್ ಠಾಕ್ರೆ ಜೂನ್ 29ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಕ್ಕೂ ಕೆಲವೇ ಗಂಟೆಗಳ ಮೊದಲು ಔರಂಗಾಬಾದ್‌ಗೆ ಛತ್ರಪತಿ ಶಿವಾಜಿ ಮಹಾರಾಜರ ಹಿರಿಯ ಮಗ ಛತ್ರಪತಿ ಸಂಭಾಜಿ ಹೆಸರನ್ನು ಮರುನಾಮಕರಣ ಮಾಡುವುದಾಗಿ ಘೋಷಿಸಿದ್ದರು. ಇದನ್ನೂ ಓದಿ: 50ರಲ್ಲಿ ಒಬ್ಬ ಶಾಸಕ ಸೋತರೂ ಶಾಶ್ವತವಾಗಿ ರಾಜಕೀಯ ತೊರೆಯುವೆ: ಏಕನಾಥ್ ಶಿಂಧೆ
Advertisement
ನವಿ ಮುಂಬೈ ವಿಮಾನ ನಿಲ್ದಾಣಕ್ಕೂ ಡಿ.ಬಿ ಪಾಟೀಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲು ಮಹಾರಾಷ್ಟ್ರ ಸರ್ಕಾರ ತೀರ್ಮಾನಿಸಿದೆ.