ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಮುಂದುವರಿದಿದ್ದು, ಏಕನಾಥ್ ಶಿಂಧೆ ಬಣದ ಶಿವಸೇನೆ ಬಂಡಾಯ ಶಾಸಕರು ತಮ್ಮ ಗುಂಪಿಗೆ ಶಿವಸೇನಾ ಬಾಳಾಸಾಹೇಬ್ ಎಂದು ಹೆಸರಿಟ್ಟಿದ್ದಾರೆ.
ಏಕನಾಥ್ ಶಿಂಧೆ ನೇತೃತ್ವದ ಶಾಸಕರು ಶಿವಸೇನಾ ಬಾಳಾಸಾಹೇಬ್ ಎಂಬ ಹೊಸ ಗುಂಪನ್ನು ರಚಿಸಿದ್ದಾರೆ ಎಂದು ಮಾಜಿ ಗೃಹ ಖಾತೆ ರಾಜ್ಯ ಸಚಿವ ಮತ್ತು ಬಂಡಾಯ ಶಾಸಕ ದೀಪಕ್ ಕೇಸರ್ಕರ್ ತಿಳಿಸಿದರು.
Advertisement
Advertisement
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಶಿವಸೇನಾ ಕಾರ್ಯಕಾರಿಣಿ ಸಭೆ ನಡೆಸುತ್ತಿರುವ ಸಂದರ್ಭದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಶಿವಸೇನಾ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಆದರೆ ಅದರ 38 ಬಂಡಾಯ ಶಾಸಕರು ಗುವಾಹಟಿಯಲ್ಲಿ ಬೀಡುಬಿಟ್ಟಿದ್ದಾರೆ.ಇದನ್ನೂ ಓದಿ: ಸೇಡಿಗಾಗಿ ರೆಬೆಲ್ ಶಾಸಕರ ಕುಟುಂಬದ ಭದ್ರತೆಯನ್ನು ಸರ್ಕಾರ ಹಿಂಪಡೆದಿದೆ- ಶಿಂಧೆ ಆರೋಪ
Advertisement
ಮಹಾರಾಷ್ಟ್ರ ಬಿಕ್ಕಟ್ಟಿನಿಂದಾಗಿ ಶಿವಸೇನಾ ಕಾರ್ಯಕರ್ತರು ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಶಿವಸೈನಿಕರು ಬಂಡಾಯ ಶಾಸಕರ ಕಚೇರಿಗಳ ಮೇಲೆ ದಾಳಿ ಮಾಡಿ ಧ್ವಂಸ ಮಾಡಿದ್ದಾರೆ. ಶಿವಸೇನಾ ಕಾರ್ಯಕರ್ತರು ಪುಣೆಯಲ್ಲಿರುವ ಬಂಡಾಯ ಪಕ್ಷದ ಶಾಸಕ ತಾನಾಜಿ ಸಾವಂತ್ ಅವರ ಕಚೇರಿಗೆ ದಾಳಿ ನಡೆಸಿದ್ದಾರೆ. ಸಾವಂತ್ ಅವರು ಏಕನಾಥ್ ಶಿಂಧೆ ಬಣದ ಬಂಡಾಯ ಶಿವಸೇನಾ ಶಾಸಕರಲ್ಲಿ ಒಬ್ಬರಾಗಿದ್ದು, ಪ್ರಸ್ತುತ ಅಸ್ಸಾಂನ ಗುವಾಹಟಿಯಲ್ಲಿ ಬೀಡುಬಿಟ್ಟಿದ್ದಾರೆ.
Advertisement
ಇದಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರೋಧ ವ್ಯಕ್ತಪಡಿಸಿದ್ದು, ಕೆಲವರು ಏನನ್ನಾದರೂ ಹೇಳಲು ನನ್ನನ್ನು ಕೇಳುತ್ತಿದ್ದಾರೆ ಆದರೆ ಬಂಡಾಯ ಶಾಸಕರು ಏನು ಬೇಕಾದರೂ ಮಾಡಬಹುದು. ಅವರ ವಿಷಯಗಳಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಅವರು ತಮ್ಮದೇ ಆದ ನಿರ್ಧಾರ ತೆಗೆದುಕೊಳ್ಳಬಹುದು. ಆದರೆ ಯಾರೂ ಬಾಳಾಸಾಹೇಬ್ ಠಾಕ್ರೆ ಹೆಸರನ್ನು ಬಳಸಬಾರದು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಮುಂಬೈಯಲ್ಲಿ ಜೂನ್ 30ರವರೆಗೂ 144 ಸೆಕ್ಷನ್ ಜಾರಿ