ಮುಂಬೈ: ಮಹಾರಾಷ್ಟ್ರ (Maharashtra) ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಧಾನಸಭಾ ಫಲಿತಾಂಶದ ಬಳಿಕ ಮಂಗಳವಾರ ಬೆಳಗ್ಗೆ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದರು. ಇದನ್ನೂ ಓದಿ: ಆರ್‌ಬಿಐನ ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು
ಹೊಸ ಸಿಎಂ ಪ್ರಮಾಣ ವಚನ ಸ್ವೀಕರಿಸುವ ವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವಂತೆ ಶಿಂಧೆ ಅವರಿಗೆ ರಾಜ್ಯಪಾಲರು ಸೂಚಿಸಿದರು. ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರೊಂದಿಗೆ ಶಿಂಧೆ ರಾಜಭವನಕ್ಕೆ ಭೇಟಿ ರಾಜೀನಾಮೆ ಸಲ್ಲಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದೆ.
ಬಿಜೆಪಿ, ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿಯ ಮಹಾಯುತಿ ಮೈತ್ರಿಕೂಟವು 288 ಸದಸ್ಯ ಬಲದ ವಿಧಾನಸಭೆಯಲ್ಲಿ 230 ಸ್ಥಾನಗಳೊಂದಿಗೆ ಭಾರಿ ಗೆಲುವು ಸಾಧಿಸಿದೆ. ಆದರೂ, ಮುಂದಿನ ಸಿಎಂ ಯಾರಾಗಬೇಕೆಂಬುದರ ಬಗ್ಗೆ ಆಡಳಿತಾರೂಢ ಒಕ್ಕೂಟದ ನಾಯಕರಲ್ಲಿ ಇದುವರೆಗೆ ಒಮ್ಮತ ಮೂಡಿಲ್ಲ. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ನಿಗೂಢ ಸ್ಫೋಟ – 3 ಮನೆಗಳು ಕುಸಿತ, ಇಬ್ಬರು ಮಹಿಳೆಯರ ದುರ್ಮರಣ