ಮುಂಬೈ: ಮಹಾರಾಷ್ಟ್ರ ಮೈತ್ರಿಕೂಟದ ವಿರುದ್ಧ ಬಂಡಾಯ ಎದ್ದು ಸರ್ಕಾರ ಬೀಳಲು ಕಾರಣರಾದ ಏಕನಾಥ್ ಶಿಂಧೆಗೆ ಬಿಜೆಪಿ ಮುಖ್ಯಮಂತ್ರಿ ಪಟ್ಟ ಕಟ್ಟಿದೆ. ಶಿಂಧೆ ಅವರನ್ನೇ ಸಿಎಂ ಎಂದು ಘೋಷಿಸುವ ಮೂಲಕ ಉದ್ಧವ್ ಠಾಕ್ರೆಗೆ ಬಿಜೆಪಿ ಮತ್ತೊಂದು ಶಾಕ್ ನೀಡಿದೆ.
ಇಂದು ರಾತ್ರಿ 7:30ಕ್ಕೆ ಏಕನಾಥ್ ಶಿಂಧೆ ರಾಜ್ಯದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ಹಾಗೂ ಶಿವಸೇನಾ ಶಿಂಧೆ ಬಣ ನೇತೃತ್ವದಲ್ಲಿ ಸರ್ಕಾರ ಆಡಳಿತ ನಡೆಸಲಿದೆ.
Advertisement
"Eknath Shinde to be the Maharashtra Chief Minister, oath ceremony to be held at 7.30pm today," BJP leader Devendra Fadnavis announces in a joint press conference with Shinde pic.twitter.com/PiXv1I5nkU
— ANI (@ANI) June 30, 2022
Advertisement
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್, ಏಕನಾಥ್ ಶಿಂಧೆ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾನು ಸರ್ಕಾರದಲ್ಲಿ ಇರಲ್ಲ ಎಂದು ತಿಳಿಸಿದ್ದಾರೆ.
Advertisement
ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಸುದ್ದಿ ಹರಿದಾಡಿತ್ತು. ಆದರೆ ಏಕನಾಥ್ ಶಿಂಧೆ ಅವರನ್ನೇ ಮುಖ್ಯಮಂತ್ರಿ ಎಂದು ಘೋಷಿಸಿ ಬಿಜೆಪಿ ಅಚ್ಚರಿ ಮೂಡಿಸಿದೆ.
Advertisement
ಶಿವಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದ ವಿರುದ್ಧ ಬಂಡಾಯ ಎದ್ದು ಶಿವಸೇನಾದ ಶಾಸಕರ ತಂಡವೊಂದು ಗುವಾಹಟಿಯ ಹೋಟೆಲ್‌ನಲ್ಲಿ ಬೀಡುಬಿಟ್ಟಿತ್ತು. ಈ ತಂಡದ ನೇತೃತ್ವವನ್ನು ಏಕನಾಥ್ ಶಿಂಧೆ ವಹಿಸಿದ್ದರು. ಈ ವೇಳೆ ಶಿಂಧೆ ಬಣದೊಂದಿಗೆ ಬಿಜೆಪಿ ಮೈತ್ರಿ ಮಾತುಕತೆ ನಡೆಸಿತ್ತು. ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಉರುಳಲು ಪ್ರಮುಖ ಕಾರಣರಾದ ಶಿಂಧೆ ಅವರನ್ನೇ ರಾಜ್ಯದ ಸಿಎಂ ಆಗಿ ಬಿಜೆಪಿ ಘೋಷಿಸಿದೆ.