ಆಸ್ತಿ ಕಲಹ – ತಮ್ಮನಿಗೆ ಅಣ್ಣನೇ ಗುಂಡು ಹಾರಿಸಿ ಕೊಲೆ

Public TV
1 Min Read
Madikeri Murder copy

ಮಡಿಕೇರಿ: ಆಸ್ತಿ ವಿಚಾರವಾಗಿ ಸಹೋದರರ ನಡುವೆ ಕಲಹ ಏರ್ಪಟ್ಟು ಅಣ್ಣನೇ ತಮ್ಮನಿಗೆ ಗುಂಡಿನ ಹಾರಿಸಿ ಕೊಲೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಭ್ಯತ್ ಮಂಗಲ(AbyathMangala) ಗ್ರಾಮದಲ್ಲಿ ನಡೆದಿದೆ.

ಕೊಳಂಬೆ(Kolambe) ವಿನು ಬೆಳ್ಯಪ್ಪ(53) ಮೃತ ದುರ್ದೈವಿ. ನಂಜರಾಯಪಟ್ಟಣದಲ್ಲಿ ವಾಸವಾಗಿದ್ದ ಬೆಳೆಗಾರ ಕೊಳಂಬೆ ವಿನು, ಅಭ್ಯತ್ ಮಂಗಲದಲ್ಲಿ ಹೊಂದಿರುವ ತೋಟದ ಗೋದಾಮಿನಲ್ಲಿ ಪೈಪುಗಳ ಪರಿಶೀಲನೆಗೆ ತೆರಳಿದ ಸಂದರ್ಭ ಸಹೋದರ ಮಣಿ ಹಿಂದಿನಿಂದ ಬಂದು ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ಕೇಸ್- ಜನಾರ್ದನ ರೆಡ್ಡಿ ದೋಷಿ

ಆರೋಪಿ ಮಣಿ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಅಣ್ಣ-ತಮ್ಮನ ನಡುವೆ ಹಲವು ದಿನಗಳಿಂದ ಆಸ್ತಿ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಇದನ್ನೂ ಓದಿ: ಮಗಳ ಸಾವಿಗೆ ಪ್ರತೀಕಾರ – ‘ತಮ್ಮ’ನ ಅಪ್ಪನನ್ನು ಬರ್ಬರವಾಗಿ ಕೊಂದ ತಂದೆ

ಘಟನೆ ಸಂಬಂಧಿಸಿದಂತೆ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು(Madikeri Rural Police) ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೊಡಗು ಎಸ್‌ಪಿ ರಾಮರಾಜನ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Share This Article