ಬೆಂಗಳೂರು: ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬಸವೇಶ್ವರ ನಗರದಲ್ಲಿ ನಡೆದಿದೆ.
ಈಶ್ವರ್ ಆಚಾರ್ಯ ಹಾಗೂ ಗೌರಿ ಮೃತ ವೃದ್ಧ ದಂಪತಿ. ಇಬ್ಬರೂ ಶುಗರ್ ಹಾಗೂ ಬಿಪಿಯಿಂದ ಬಳಲುತ್ತಿದ್ದರು. ದಿನದಿಂದ ದಿನಕ್ಕೆ ಅನಾರೋಗ್ಯ ಉಲ್ಬಣಗೊಳ್ಳುತ್ತಿತ್ತು. ಇದೇ ಕಾರಣಕ್ಕೆ ಬೇಸತ್ತು ಜ್ಯೂಸ್ ಬಾಟಲ್‌ನಲ್ಲಿ ವಿಷ ಬೆರೆಸಿಕೊಂಡು ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟ ಯುವಕ ಪೊಲೀಸ್ ವಶಕ್ಕೆ
ಸ್ಥಳಕ್ಕೆ ಬಸವೇಶ್ವರ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶಿಲನೆ ನಡೆಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ – ಆರೋಪಿ ಪುಣ್ಯೇಶ್ ಬಂಧನ
