ಮೈಸೂರು: ಪಿಎಸ್‍ಐ (PSI) ಪುತ್ರನೊಬ್ಬನ ವ್ಹೀಲಿಂಗ್ ಪುಂಡಾಟಕ್ಕೆ ವೃದ್ಧನೊಬ್ಬ ಬಲಿಯಾದ ಘಟನೆ ನಂಜನಗೂಡು (Nanjangud) ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ ಮಹಿಳಾ ಪಿಎಸ್‍ಐ ಪುತ್ರ ಸೈಯದ್ ಐಮಾನ್ ಎಂದು ತಿಳಿದು ಬಂದಿದೆ. ಆರೋಪಿ ಬೈಕ್‍ನಲ್ಲಿ (Bike) ವ್ಹೀಲಿಂಗ್ ಮಾಡುತ್ತಾ ರಸ್ತೆಯಲ್ಲಿ ಹೋಗುತ್ತಿದ್ದ ವೃದ್ಧನಿಗೆ ಡಿಕ್ಕಿ ಹೊಡೆಸಿದ್ದ. ಪರಿಣಾಮ ವೃದ್ಧ ಗುರುಸ್ವಾಮಿ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದರು. ಬಳಿಕ ಸ್ಥಳೀಯರು ಗಾಯಗೊಂಡಿದ್ದ ಆರೋಪಿ ಹಾಗೂ ವೃದ್ಧನ ಮೃತ ದೇಹವನ್ನು ಕೆಆರ್ ಆಸ್ಪತ್ರೆಗೆ ಸಾಗಿಸಿದ್ದರು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಸೈಯದ್ ಐಮಾನ್‍ನನ್ನು ನಂಜನಗೂಡು ಗ್ರಾಮಾಂತರ ಠಾಣೆಯ ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ಇದನ್ನೂ ಓದಿ: ಮಹಿಳಾ ಪಿಎಸ್‍ಐ ಪುತ್ರನ ವ್ಹೀಲಿಂಗ್ ಪುಂಡಾಟ – ಪೊಲೀಸರ ಅತಿಥಿಯಾದ ಯುವಕ
Advertisement
Advertisement
ಈ ಸಂಬಂಧ ಮೃತ ಗುರುಸ್ವಾಮಿ ಪುತ್ರ ಮಹದೇವಸ್ವಾಮಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಅಪಾಯಕಾರಿಯಾಗಿ ಬೈಕ್ ಚಲಾಯಿಸಿ ಡಿಕ್ಕಿ ಹೊಡೆಸಿ ತಂದೆಯ ಸಾವಿಗೆ ಆರೋಪಿ ಕಾರಣನಾಗಿದ್ದಾನೆ ಎಂದು ಉಲ್ಲೇಖಿಸಲಾಗಿದೆ. ದೂರಿನ ಅನ್ವಯ ಪೊಲೀಸರು ಆರೋಪಿಯ ವಿಚಾರಣೆಗೆ ಸಿದ್ಧತೆ ನಡೆಸಿದ್ದಾರೆ. ಪ್ರಕರಣದಲ್ಲಿ ಬಳಕೆಯಾದ ನಂಬರ್ ಇಲ್ಲದ ಬೈಕ್ ಒಂದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Advertisement
Advertisement
ಪಿಎಸ್‍ಐ ಯಾಸ್ಮಿನ್ ತಾಜ್ ಅವರ ಪುತ್ರ ಸೈಯ್ಯದ್ ಐಮಾನ್‍ನನ್ನು ಈ ಹಿಂದೆ ಕೂಡ ಅಪಾಯಕಾರಿ ವ್ಹೀಲಿಂಗ್ ವಿಚಾರಕ್ಕೆ ಪೊಲೀಸರು ವಶಕ್ಕೆ ಪಡೆದು ದಂಡ ವಿಧಿಸಿ ತಿಳುವಳಿಕೆ ಹೇಳಿ ಕಳುಹಿಸಿದ್ದರು. ಇದನ್ನೂ ಓದಿ: ನಡು ರಸ್ತೆಯಲ್ಲೇ ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ
Web Stories