ರಾಮನಗರ: ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವೃದ್ಧ ಸಾವನ್ನಪ್ಪಿರುವ ಘಟನೆ ರಾಮನಗರ (Ramanagara) ತಾಲೂಕಿನ ರೇವಣಸಿದ್ದೇಶ್ವರ ಬೆಟ್ಟದಲ್ಲಿ (Revanasiddeshwara Hill) ನಡೆದಿದೆ.
ಬಿಡದಿ (Bidadi) ಹೋಬಳಿಯ ಕೆಂಪನಹಳ್ಳಿ ನಿವಾಸಿ ರೇವಣ್ಣ (65) ಮೃತ ದುರ್ದೈವಿ. ಇಂದು ಬೆಳಗ್ಗೆ ಕುಟುಂಬ ಸಮೇತ ರೇವಣಸಿದ್ದೇಶ್ವರ ಬೆಟ್ಟಕ್ಕೆ ಬಂದಿದ್ದ ರೇವಣ್ಣ, ದೇವರ ದರ್ಶನ ಮಾಡಲು ಬೆಟ್ಟ ಹತ್ತುವಾಗ ಕಾಲು ಜಾರಿ ಕಂದಕಕ್ಕೆ ಬಿದ್ದಿದ್ದಾರೆ. ಮೇಲಿಂದ ಬಿದ್ದ ರಭಸಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಕೆರೆಗುರುಳಿದ ಕಾರು – ಸ್ಥಳೀಯರ ಸಮಯಪ್ರಜ್ಞೆಯಿಂದ ಉಳಿದ ಮೂವರ ಜೀವ
ವಿಷಯ ತಿಳಿದು ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದು, ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರೇವಣ್ಣ ಶವ ಮೇಲಕ್ಕೆತ್ತಿದ್ದಾರೆ. ಕಂದಕದಿಂದ ಶವ ಹೊರ ತೆಗದು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಗ್ನಿ ದುರಂತದಲ್ಲಿ 25 ಮಂದಿ ಬಲಿ – ಗೋವಾ ನೈಟ್‌ಕ್ಲಬ್ ಮ್ಯಾನೇಜರ್ ಅರೆಸ್ಟ್, ಮಾಲೀಕನ ವಿರುದ್ಧ ವಾರಂಟ್

