ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಂಬಾರಗಡಿಗೆ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆದಿದೆ. ವೃದ್ಧ ದಂಪತಿ ಗುಂಡೇಟಿಗೆ ಬಲಿಯಾಗಿದ್ದಾರೆ.
ಕನ್ನಿಕಂಡ ಕುಟುಂಬದ 74 ವರ್ಷದ ಸುಬ್ಬಯ್ಯ ಹಾಗೂ ಅವರ 72 ವರ್ಷದ ಪತ್ನಿ ಭೋಜಮ್ಮ ಮೃತರು. ಪ್ರಾಥಮಿಕ ಮಾಹಿತಿಯಂತೆ, ಸುಬ್ಬಯ್ಯ ಅವರು ಪತ್ನಿಗೆ ಗುಂಡು ಹಾರಿಸಿ, ಬಳಿಕ ತಾವೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ದಂಪತಿಯ ಸಾವಿಗೆ ನಿಖರ ಕಾರಣ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

