ಬೆಂಗಳೂರು: ಬಿಎಂಟಿಸಿ (BMTC) ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದು ವೃದ್ಧೆ ಸಾವಿಗೀಡಾಗಿರುವ ಘಟನೆ ಸೆಂಟ್ರಲ್ ಸಿಲ್ಕ್ ಬೋರ್ಡ್ ಬಸ್ ನಿಲ್ದಾಣದ ಬಳಿ ನಡೆದಿದೆ.
62 ವರ್ಷದ ವೃದ್ಧೆ ಎಲೆಕ್ಟ್ರಿಕ್ ಬಸ್ (Electric Bus) ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಿವರ್ಸ್ ತೆಗೆಯುವಾಗ ಬಸ್ ಹಿಂಬದಿಯಿಂದ ರಸ್ತೆ ದಾಟುತಿದ್ದ ಮಾಡ್ತಿದ್ದ ವೃದ್ಧೆಗೆ ಡಿಕ್ಕಿಯಾಗಿದೆ. ಪರಿಣಾಮ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದೀಗ ಒಂದೇ ತಿಂಗಳಲ್ಲಿ ಬಿಎಂಟಿಸಿ ಬಸ್‌ಗೆ ಮೂವರು ಬಲಿಯಾಗಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್; ದೂರುದಾರ ಮಾನಸಿಕ ಅಸ್ವಸ್ಥನೋ, ಸ್ವಸ್ಥನೋ ಪರೀಕ್ಷಿಸಬೇಕು: ಬಿ.ಸಿ.ಪಾಟೀಲ್
ಘಟನಾ ಸ್ಥಳಕ್ಕೆ ಬಿಎಂಟಿಸಿಯ ಹಿರಿಯ ಅಧಿಕಾರಿಗಳು ಹಾಗೂ ಟಾಟಾ ಸ್ಮಾರ್ಟ್ ಲಿಮಿಟೆಡ್ ಕಂಪನಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಮಡಿವಾಳ ಪೋಲಿಸ್ (Madivala Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.