ಬೀದರ್: ಸೌದಿ ಅರೇಬಿಯಾದಲ್ಲಿ (Saudi Arabia) ಬಸ್ ಮತ್ತು ಡೀಸೆಲ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೀದರ್ (Bidar) ಮೂಲದ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ.
ಮೃತ ವೃದ್ಧೆಯನ್ನು ಬೀದರ್ ಮೂಲದ ರಹಮತ್ ಬಿ (80) ಎಂದು ತಿಳಿಯಾಗಿದೆ.ಇದನ್ನೂ ಓದಿ: ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ‘ಲೋಕಾ’ ದಾಳಿ – ಅಪಾರ ಪ್ರಮಾಣದ ಚಿನ್ನ, ಬೆಳ್ಳಿ, ನಗದು, ಆಸ್ತಿ ಪತ್ತೆ
ಬೀದರ್ ನಗರದ ಮೈಲೂರಿನ ಸಿಎಂಸಿ ಕಾಲೋನಿಯ ನಿವಾಸಿಯಾಗಿರುವ ಇವರು ನ.9ರಂದು ಬೀದರ್‌ನಿಂದ ಮೆಕ್ಕಾ ಹಾಗೂ ಮದೀನಾಗೆ ತೆರಳಿದ್ದರು. ಬಸ್ ಅಪಘಾತದಲ್ಲಿ ವೃದ್ಧೆ ಸಜೀವ ದಹನವಾಗಿದ್ದು, ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ವೃದ್ಧೆ ಸಾವನ್ನಪ್ಪಿರುವ ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತಾಯಿಯ ನೆನೆದು ಮಕ್ಕಳು ಬಿಕ್ಕಿ ಬಿಕ್ಕಿ ಅಳುತ್ತಿದ್ದು, ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಇಷ್ಟೆಲ್ಲ ಆದರೂ ಕ್ಷೇತ್ರದ ಸಚಿವ ರಹೀಂಖಾನ್ ಮತ್ತು ಉಸ್ತುವಾರಿ ಸಚಿವ ಖಂಡ್ರೆ ವಿರುದ್ಧ ಕುಟುಂಬಸ್ಥರ ಅಸಮಾಧಾನ ವ್ಯಕ್ತಪಡೆಸಿದ್ದಾರೆ.
ಸೋಮವಾರ ಬೆಳಗಿನ ಜಾವ 1:30ರ ಸುಮಾರಿಗೆ ಸೌದಿ ಅರೇಬಿಯಾದ ಮೆಕ್ಕಾ ಬಳಿಯ ಅಲ್ ಮುಫ್ರಿಹಾತ್ ಬಳಿ ಭೀಕರ ಅಪಘಾತ ಸಂಭವಿಸಿ, 42 ಸಾವನ್ನಪ್ಪಿದ್ದರು. ಮೆಕ್ಕಾದಲ್ಲಿ ತಮ್ಮ ಉಮ್ರಾ ವಿಧಿಗಳನ್ನು ಪೂರ್ಣಗೊಳಿಸಿ, ಮದೀನಾಕ್ಕೆ ತೆರಳುತ್ತಿದ್ದಾಗ ಪ್ರವಾಸಿಗರ ಬಸ್ಸಿಗೆ ಡಿಸೇಲ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿಹೊತ್ತಿಕೊಂಡಿದೆ. ಘಟನೆ ವೇಳೆ ಪ್ರಯಾಣಿಕರು ನಿದ್ದೆಯಲ್ಲಿದ್ದರು. ಹೀಗಾಗಿ ಸಾವು ನೋವಿನ ಸಂಖ್ಯೆ ಹೆಚ್ಚಾಗಿದೆ.ಇದನ್ನೂ ಓದಿ: ಸೌದಿಯಲ್ಲಿ ಭೀಕರ ಬಸ್ ದುರಂತ – 42 ಭಾರತೀಯ ಹಜ್ ಯಾತ್ರಿಕರು ಸಜೀವ ದಹನ

