ನವದೆಹಲಿ: ಪೊಲೀಸ್ ಅಧಿಕಾರಿಯೊಬ್ಬರ ಮಗ ಕುಡಿದು ಚಲಾಯಿಸುತ್ತಿದ್ದ ಮರ್ಸಿಡಿಸ್ ಕಾರು ಡಿಕ್ಕಿ ಹೊಡೆದು ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ದೆಹಲಿಯಲ್ಲಿ (Delhi) ನಡೆದಿದೆ.
ದೆಹಲಿಯ ನರೇಲಾದಲ್ಲಿ ಬೆಳಗಿನ ನಡೆದುಕೊಂಡು ಹೋಗುತ್ತಿದ್ದ ವೃದ್ಧ ಮಹಿಳೆಗೆ ವೇಗವಾಗಿ ಬಂದ ಮರ್ಸಿಡಿಸ್ ಕಾರು ಡಿಕ್ಕಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಸ್ಥಳದಲ್ಲಿದ್ದ ವೃದ್ಧೆ ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ ಮಾಮುರ್‌ಪುರದ ಹಿಮಾಲಯ ಅಪಾರ್ಟ್‌ಮೆಂಟ್ ಹೊರಗೆ ಈ ಘಟನೆ ಸಂಭವಿಸಿದೆ. 70 ವರ್ಷದ ಊರ್ಮಿಳಾ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಖಾಸಗಿ ಬಸ್ ಪಲ್ಟಿ – 8 ಮಂದಿ ದುರ್ಮರಣ, 10 ಮಂದಿಗೆ ಗಂಭೀರ ಗಾಯ
ಮರ್ಸಿಡಿಸ್ ಕಾರಿನಲ್ಲಿ ಹರಿಯಾಣ ಪೊಲೀಸ್ ಇಲಾಖೆಯ ಸಬ್ ಇನ್ಸ್‌ಪೆಕ್ಟರ್ ಮಗ ಶುಭಂ ಇದ್ದ. ಅಪಘಾತದ ಸಮಯದಲ್ಲಿ ಶುಭಂ ಕುಡಿದಿದ್ದ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಿದ್ದಾರೆ. ಪೊಲೀಸರು ಸ್ಥಳದಲ್ಲೇ ಆತನನ್ನು ಬಂಧಿಸಿದ್ದಾರೆ.
ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಮರ್ಸಿಡಿಸ್ ಕಾರು, ವ್ಯಾಗನ್ ಆರ್ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಗುದ್ದ ಪರಿಣಾಮವಾಗಿ ವ್ಯಾಗನ್ ಆರ್ ಕಾರು ಹಿಂದಕ್ಕೆ ಎಸೆಯಲ್ಪ,, ದೂರದಲ್ಲಿ ನಿಲ್ಲಿಸಿದ್ದ ತ್ರಿಚಕ್ರ ವಾಹನ ಲೋಡಿಂಗ್ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಉದ್ಯೋಗದ ಆಸೆ ತೋರಿಸಿ ಭಾರತೀಯ ಮಹಿಳೆ ಕಿಡ್ನ್ಯಾಪ್; 11 ಲಕ್ಷ ಹಣಕ್ಕೆ ಬಿಯರ್ ಅಂಗಡಿ ಮಾಲೀಕನಿಗೆ ಸೇಲ್
ವೃದ್ಧೆ ತ್ರಿಚಕ್ರ ವಾಹನ ಮತ್ತು ವ್ಯಾಗನ್ ಆರ್ ನಡುವೆ ಸಿಲುಕಿಕೊಂಡು ಮೃತಪಟ್ಟಿದ್ದಾರೆ. ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕುಡಿದು ವಾಹನ ಚಲಾಯಿಸಿದ್ದ ಪೊಲೀಸ್ ಅಧಿಕಾರಿ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.



