ಜೈಪುರ: ಉಗ್ರರ ದಾಳಿಗೆ ಹುತಾತ್ಮರಾದ ಯೋಧರ ಕುಟುಂಬದವರಿಗೆ ಸರ್ಕಾರ ಸೇರಿದಂತೆ ಅನೇಕರು ಆರ್ಥಿಕ ಸಹಾಯ ಮಾಡುತ್ತಿದ್ದಾರೆ. ಆದರೆ ರಾಜಸ್ಥಾನದ ಅಜ್ಮೇರ್‍ದಲ್ಲಿ ಬದುಕಿದ್ದಾಗ ಭಿಕ್ಷೆ ಬೇಡಿ ಸಂಪಾದನೆ ಮಾಡಿದ್ದ ಅಜ್ಜಿಯೊಬ್ಬರ ಹಣವೂ ಈಗ ಯೋಧರ ಕುಟುಂಬಕ್ಕೆ ಸಹಾಯವಾಗಿದೆ.
ಭಿಕ್ಷುಕಿ ನಂದಿನಿ ಶರ್ಮಾ ಸಂಪಾದನೆ ಮಾಡಿದ್ದ ಹಣವನ್ನು ಈಗ ಹುತಾತ್ಮರ ಕುಟುಂಬಕ್ಕೆ ನೀಡಲಾಗಿದೆ. ನಂದಿನಿ ಶರ್ಮಾ 2018 ಆಗಸ್ಟ್ ರಲ್ಲಿ ಮೃತಪಟ್ಟಿದ್ದು, ಮೃತಪಡುವುದಕ್ಕೂ ಮೊದಲು ನನ್ನ ಬಳಿ ಇರುವ ಹಣವನ್ನು ದೇಶ ಮತ್ತು ಸಮಾಜಕ್ಕಾಗಿ ಬಳಸಬೇಕೆಂಬುದು ಹೇಳಿಕೊಂಡಿದ್ದರಂತೆ. ಹೀಗಾಗಿ ಭಿಕ್ಷೆ ಬೇಡಿ ಸಂಪಾದನೆ ಮಾಡಿದ್ದ 6.61 ಲಕ್ಷ ಹಣವನ್ನು ಪುಲ್ವಾಮಾ ದಾಳಿಯಲ್ಲಿ ವೀರಮರಣ ಹೊಂದಿದ್ದ ಕುಟುಂಬದವರಿಗೆ ನೀಡಲಾಗಿದೆ.
Advertisement
Advertisement
ಮೃತ ನಂದಿನಿ ಶರ್ಮಾ ಅಜ್ಮೇರ್ ಬಜರಂಗಢದಲ್ಲಿರುವ ಅಂಬೆ ಮಾತೆ ದೇವಸ್ಥಾನದ ಮುಂದೆ ಭಿಕ್ಷೆ ಬೇಡುತ್ತಿದ್ದರು. ಅವರು ಪ್ರತಿದಿನ ಗಳಿಸುತ್ತಿದ್ದ ಹಣವನ್ನು ಅಂದೇ ಬ್ಯಾಂಕಿಗೆ ಹೋಗಿ ಜಮಾ ಮಾಡುತ್ತಿದ್ದರು. ಅಷ್ಟೇ ಅಲ್ಲದೇ ತಾವು ಸಂಪಾದಿಸಿ ಹಣವನ್ನು ಸುರಕ್ಷಿತವಾಗಿ ಬಳಸಬೇಕೆಂದು ಇಬ್ಬರು ಟ್ರಸ್ಟಿಗಳ ಬಳಿ ಸಹ ಕೇಳಿಕೊಂಡಿದ್ದರು. ಅಷ್ಟೇ ಅಲ್ಲದೇ ಮೃತಪಟ್ಟ ನಂತರ ಈ ಹಣ ದೇಶಕ್ಕಾಗಿ ವಿನಿಯೋಗಿಸಬೇಕು ಎಂದು ವಿಲ್ ಬರೆದಿಟ್ಟಿದ್ದರು.
Advertisement
ಶರ್ಮಾ 2018 ಮೃತಪಟ್ಟಿದ್ದಾರೆ. ಆದರೆ ಟ್ರಸ್ಟಿಗಳು ಸೂಕ್ತ ಸಮಯ ಬಂದಾಗ ಹಣವನ್ನು ದಾನ ಮಾಡಲು ಕಾಯುತ್ತಿದ್ದರು. ಇತ್ತೀಚೆಗೆ ಪುಲ್ವಾಮಾ ಉಗ್ರ ದಾಳಿಯಲ್ಲಿ 44 ಯೋಧರು ಮೃತಪಟ್ಟಿದ್ದರು. ಇದೇ ಸೂಕ್ತ ಸಮಯ ಎಂದು ಟ್ರಸ್ಟಿಗಳು ನಿರ್ಧಾರ ಮಾಡಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಹುತಾತ್ಮ ಸೈನಿಕರ ಕುಟುಂಬಕ್ಕೆ ನೀಡಲಾಗುವ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದಾರೆ. ಟ್ರಸ್ಟ್ ಗಳಿಂದ ಹಣವನ್ನು ಪಡೆದು ಅವರಿಗೆ ರಶೀದಿ ನೀಡಲಾಗಿದೆ ಎಂದು ಅಜ್ಮೇರ್ ಜಿಲ್ಲಾಧಿಕಾರಿ ವಿಶ್ವ ಮೋಹನ್ ಶರ್ಮಾ ತಿಳಿಸಿದ್ದಾರೆ.
Advertisement
Ajmer: Around Rs 6.6 lakh worth savings of a lady beggar, who passed away last year, was donated for families of CRPF soldiers who lost their lives in Pulwama attack. Her guardian handed a bank draft of the amount to the district collector. #Rajasthan pic.twitter.com/CUkW6B0zXb
— ANI (@ANI) February 21, 2019
ಮೃತ ಅಜ್ಜಿ ಸಂಪಾದನೆ ಮಾಡಿದ್ದ ಹಣವನ್ನು ಹುತಾತ್ಮರ ಕುಟುಂಬಕ್ಕೆ ನೀಡಲಾದ ವಿಷಯ ತಿಳಿದು ದೇವಾಲಯ ಭಕ್ತರು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ಅವರಿಗೆ ಭಕ್ತರು ಯಾವಾಗಲೂ ಗೌರವ ಕೊಡುತ್ತಿದ್ದರು. ಶರ್ಮಾ ಅವರಿಗೆ ಹಣದ ಜತೆ ಊಟ, ಬಟ್ಟೆಯನ್ನು ಸಹ ದಾನ ಮಾಡುತ್ತಿದ್ದರು. ಅವರು ಪ್ರತಿದಿನ ಹಣವನ್ನು ಬ್ಯಾಂಕ್‍ನಲ್ಲಿ ಜಮೆ ಮಾಡುತ್ತಿದ್ದ ವಿಚಾರ ಬಗ್ಗೆ ನಮಗೆಲ್ಲ ತಿಳಿದಿತ್ತು ಎಂದು ದೇವಸ್ಥಾನದ ಪುರೋಹಿತರು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv