ಹಾಸನ: ಅರಕಲಗೂಡು (Arkalagud) ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಬಳಿಯ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ ವೃದ್ದೆಯ ಶವ ಪತ್ತೆಯಾಗಿದೆ.
ಹಿರೀಹಳ್ಳಿಕೊಪ್ಪಲು ಗ್ರಾಮದ ಲಕ್ಷ್ಮಮ್ಮ (67) ಮೃತಪಟ್ಟಿರುವ ಮಹಿಳೆ. ಚಿನ್ನಾಭರಣಕ್ಕಾಗಿ ದುಷ್ಕರ್ಮಿಗಳು ಕೊಲೆ ಮಾಡಿ ಚೀಲದಲ್ಲಿ ತುಂಬಿ ನಾಲೆಗೆ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಪತಿ ಅಣ್ಣೇಗೌಡ ಅವರ ಜೊತೆ ಲಕ್ಷ್ಮಮ್ಮ ವಾಸವಾಗಿದ್ದರು. ಶನಿವಾರ (ಅ.3) ವಿಜಿ ಕೊಪ್ಪಲಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದವರು ನಾಪತ್ತೆಯಾಗಿದ್ದರು. ಇದನ್ನೂ ಓದಿ: ಜಿಮ್ ಟ್ರೈನರ್ ನಂದನ್ ಕೊಲೆ ಕೇಸ್ – ಸಲಿಂಗಕಾಮ, ಡ್ರಗ್ಸ್ ನಶೆಯಲ್ಲಿ ಕೃತ್ಯ?
ಅ.6 ರಂದು ಪತ್ನಿ ಕಾಣಿಯಾಗಿರುವ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲು ಅಣ್ಣೇಗೌಡ ಬಂದಿದ್ದರು. ಈ ವೇಳೆ ಹುಡುಕಾಟ ನಡೆಸಿದಾಗ ವೃದ್ಧೆಯ ಶವ ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಶುಭನ್ವಿತಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೊಣನೂರು ಪೊಲೀಸ್ (Police) ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ, ಇಬ್ಬರಿಗೆ ಗಾಯ

