ಚಿಕ್ಕೋಡಿ: ಗೃಹಲಕ್ಷ್ಮಿ ಯೋಜನೆಯಿಂದ (Gruhalakshmi Scheme) ಬಂದ ಹಣದಿಂದ ಅಜ್ಜಿಯೊಬ್ಬರು ಊರಿಗೆ ಹೋಳಿಗೆ ಊಟ ಹಾಕಿಸಿ ಗಮನ ಸೆಳೆದಿದ್ದಾರೆ.
ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಜನರಿಗೆ ಅಜ್ಜಿ ಹೋಳಿಗೆ ಊಟ ಹಾಕಿಸಿದ್ದಾರೆ. ಅಕ್ಕಾತಾಯಿ ಲಂಗೋಟಿ ಎಂಬ ವೃದ್ಧೆಯಿಂದ ಊರಿಗೆಲ್ಲಾ ಊಟ ಹಾಕಿಸಿದ್ದಾರೆ. ಇದನ್ನೂ ಓದಿ: Exclusive Video | ಸೆಂಟ್ರಲ್ ಜೈಲಲ್ಲಿ ಕೊಲೆ ಆರೋಪಿ ದರ್ಶನ್ ಬಿಂದಾಸ್?
ಸಿದ್ದರಾಮಯ್ಯನವರು ಪ್ರತಿ ತಿಂಗಳು ನಮಗೆಲ್ಲಾ 2,000 ಹಣ ನೀಡುತ್ತಿದ್ದಾರೆ. ರಾಜಕೀಯವಾಗಿ ಸಿದ್ದರಾಮಯ್ಯನವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು. ಹೀಗಾಗಿ ಗ್ರಾಮದ ದೇವತೆಗೆ ಪೂಜೆ ಸಲ್ಲಿಸಿ ಊರಿಗೆ ಹೋಳಿಗೆ ಊಟ ಹಾಕಿಸಿದ್ದಾರೆ.
ಐದು ಜನ ಮುತ್ತೈದೆಯರಿಗೆ ಉಡಿ ತುಂಬಿ ಅಜ್ಜಿ ಹರಸಿದ್ದಾರೆ. ಅಜ್ಜಿಯ ಕಾರ್ಯಕ್ಕೆ ಸುಟ್ಟಟ್ಟಿ ಗ್ರಾಮದ ಮಹಿಳೆಯರು ಸಾಥ್ ನೀಡಿದ್ದಾರೆ. ಇದನ್ನೂ ಓದಿ: ದೋಸ್ತಿಗಳಿಂದ ರಾಜಭವನ ದುರುಪಯೋಗ ಹೈಕಮಾಂಡ್‍ಗೆ ಅರ್ಥವಾಗಿದೆ: ಹೆಚ್.ಸಿ.ಮಹಾದೇವಪ್ಪ