ನವದೆಹಲಿ: ಕೇಂದ್ರ ಚುನಾವಣಾ ಆಯೋಗದೊಂದಿಗೆ (Election Commission Of India) ಚುನಾವಣಾ ಬಾಂಡ್‌ಗಳ ಅಸಮರ್ಪಕ ಮಾಹಿತಿ ಹಂಚಿಕೊಂಡ ಭಾರತೀಯ ಸ್ಟೇಟ್ ಬ್ಯಾಂಕ್ ಅನ್ನು (SBI) ಸುಪ್ರೀಂ ಕೋರ್ಟ್ (Supreme Court) ತೀವ್ರ ತರಾಟೆಗೆ ತೆಗೆದುಕೊಂಡಿದೆ. ಯಾರು ಯಾರಿಗೆ ಚುನಾವಣಾ ಬಾಂಡ್ (Electoral Bonds) ನೀಡಿದರು ಎನ್ನುವುದರ ಜೊತೆಗೆ ಯಾವ ದಿನಾಂಕದಂದು ನೀಡಿದರು ಮತ್ತು ಬಾಂಡ್‌ನ ಸೀರಿಯಲ್ ಸಂಖ್ಯೆ ಏನು ಎನ್ನುವುದನ್ನು ನೀಡಬೇಕು ಎಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.
ಚುನಾವಣಾ ಬಾಂಡ್‌ಗೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿದ ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠ, ಮಾರ್ಚ್ 11ರ ನ್ಯಾಯಾಲಯದ ಆದೇಶವನ್ನು ಎಸ್‌ಬಿಐ ಸಂಪೂರ್ಣವಾಗಿ ಪಾಲಿಸಿಲ್ಲ. ಚುನಾವಣಾ ಬಾಂಡ್‌ಗಳ ಖರೀದಿ ದಿನಾಂಕ, ಖರೀದಿದಾರರ ಹೆಸರು, ಮುಖಬೆಲೆ ಸೇರಿದಂತೆ ಎಲ್ಲಾ ವಿವರಗಳನ್ನು ನೀಡಲು ಸೂಚಿಸಿತ್ತು. ಆದರೆ ಎಸ್‌ಬಿಐ ಚುನಾವಣಾ ಬಾಂಡ್ ಸಂಖ್ಯೆಗಳನ್ನು (ಆಲ್ಫಾ ನ್ಯೂಮರಿಕ್ ಸಂಖ್ಯೆಗಳು) ಬಹಿರಂಗಪಡಿಸಿಲ್ಲ. ಈ ಹಿನ್ನೆಲೆ ನಾವು ನೋಟಿಸ್‌ಗೆ ನಿರ್ದೇಶನ ನೀಡುತ್ತೇವೆ ಎಂದು ಹೇಳಿದೆ. ಇದನ್ನೂ ಓದಿ: ನಾಳೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ
Advertisement
Advertisement
ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿ, ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದಂತೆ ಎಸ್‌ಬಿಐ ತಮ್ಮ ಬಳಿ ಲಭ್ಯವಿರುವ ಎಲ್ಲಾ ವಿವರಗಳನ್ನು ಒದಗಿಸುವ ಅಗತ್ಯವಿರುವ ಅಂತರ್ಗತ ಆದೇಶವಾಗಿದೆ ಎಂದು ಉನ್ನತ ನ್ಯಾಯಾಲಯದ ತೀರ್ಪು ಗಮನಸೆಳೆದರು. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಎಸ್‌ಬಿಐಗೆ ಪ್ರತಿಕ್ರಿಯೆ ನೀಡಲು ಸಮಯ ಕೋರಿದರು. ಇದನ್ನೂ ಓದಿ: ಚುನಾವಣಾ ಆಯುಕ್ತರಾಗಿ ನೇಮಕ; ಜ್ಞಾನೇಶ್ ಕುಮಾರ್, ಸುಖ್ಬೀರ್ ಸಿಂಗ್ ಅಧಿಕಾರ ಸ್ವೀಕಾರ
Advertisement
ಕಳೆದ ತಿಂಗಳು ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತು. ಏಪ್ರಿಲ್ 12, 2019 ರಿಂದ ಚುನಾವಣಾ ಬಾಂಡ್‌ಗಳ ಮೂಲಕ ಕೊಡುಗೆಗಳನ್ನು ಪಡೆದ ರಾಜಕೀಯ ಪಕ್ಷಗಳ ವಿವರಗಳನ್ನು ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಮಾರ್ಚ್ 6ರರೊಳಗೆ ಸಲ್ಲಿಸುವಂತೆ ಎಸ್‌ಬಿಐಗೆ ನಿರ್ದೇಶಿಸಿತ್ತು. ಆದರೆ ಎಸ್‌ಬಿಐ ಗಡುವಿನ ವಿಸ್ತರಣೆಯನ್ನು ಕೋರಿ ಅರ್ಜಿ ಸಲ್ಲಿಸಿತು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಎಸ್‌ಬಿಐ ಮಾಡಿದ ವಿನಂತಿಯನ್ನು ತಿರಸ್ಕರಿಸಿತು. ಇದನ್ನೂ ಓದಿ: ರಷ್ಯಾ ಅಧ್ಯಕ್ಷೀಯ ಚುನಾವಣೆ – ಕೇರಳದಲ್ಲಿ ಮತದಾನ
Advertisement
ಖರೀದಿದಾರರ ಹೆಸರು, ಚುನಾವಣಾ ಬಾಂಡ್‌ಗಳ ನಾಮನಿರ್ದೇಶನ, ನಗದೀಕರಣದ ದಿನಾಂಕ ಸೇರಿದಂತೆ ರಾಜಕೀಯ ಪಕ್ಷಗಳು ರಿಡೀಮ್ ಮಾಡಿದ ಪ್ರತಿ, ಚುನಾವಣಾ ಬಾಂಡ್‌ನ ವಿವರಗಳನ್ನು ಮಾರ್ಚ್ 12ರೊಳಗೆ ನೀಡಬೇಕು ಎಂದು ಸೂಚಿಸಿತು. ಕೋರ್ಟ್ ಸೂಚನೆ ಹಿನ್ನೆಲೆ ಮಾಹಿತಿಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಸಲ್ಲಿಸಿತ್ತು. ಸಲ್ಲಿಕೆಯಾದ ಮಾಹಿತಿ ಸದ್ಯ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಿದೆ. ಇದನ್ನೂ ಓದಿ: ಚುನಾವಣಾ ಬಾಂಡ್ ವಿವರವನ್ನು ಬಹಿರಂಗಪಡಿಸಿದ ಚುನಾವಣಾ ಆಯೋಗ