– ದೇಶಾದ್ಯಂತ ಫ್ಲೆಕ್ಸ್, ಬ್ಯಾನರ್ ರಿಮೂವ್
ಉಡುಪಿ/ಬೆಳಗಾವಿ: ಲೋಕಸಮರಕ್ಕೆ ಮುಹೂರ್ತ ನಿಗದಿಯಾಗಿದ್ದು ಭಾನುವಾರದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಉಡುಪಿಯಲ್ಲಿದ್ದ ಸಿದ್ದರಾಮಯ್ಯ ಮಂಗಳೂರಿಗೆ ವಾಪಸ್ ತೆರಳುವಾಗ ಸಚಿವ ಯು.ಟಿ. ಖಾದರ್ ಚಲಾಯಿಸುತ್ತಿದ್ದ ಕಾರಿನಲ್ಲಿ ತೆರಳಿದ್ದರು.
ಕಲ್ಸಂಕದಲ್ಲಿ ನಡೆದ ಕಾಂಗ್ರೆಸ್ ಪರಿವರ್ತನಾ ಜಾಥಾ ಮುಗಿಯೋ ವೇಳೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಲಿಂದ ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಮೀನುಗಾರ ಮಹಿಳೆಯರ ಕಾರ್ಯಕ್ರಮಕ್ಕೆ ಸರಕಾರಿ ಕಾರನ್ನು ಬಿಟ್ಟು ಸಚಿವ ಖಾದರ್ ಕಾರಿನಲ್ಲಿ ಆಗಮಿಸಿದರು. ಇದನ್ನೂ ಓದಿ: ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣೆ: ಯಾವ ಕ್ಷೇತ್ರಗಳಲ್ಲಿ ಯಾವ ದಿನ ಚುನಾವಣೆ?
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವೆ ಜಯಮಾಲಾ ಸೇರಿದಂತೆ ಹಲವು ನಾಯಕರು ಸರ್ಕಾರಿ ವಾಹನ ಬಿಟ್ಟು ಖಾಸಗಿ ಕಾರಿನಲ್ಲಿ ಪ್ರಯಾಣ ಬೆಳೆಸಿದ್ರು. ಬೆಳಗಾವಿಯ ಯರಗಟ್ಟಿಯಲ್ಲಿ ಆಯೋಜಿಸಿದ್ದ ಮೋದಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿದ್ದ ಸುರೇಶ್ ಅಂಗಡಿ ಸಹ ಸರ್ಕಾರಿ ವಾಹನ ಬಿಟ್ಟು ಬಸ್‍ನಲ್ಲೇ ಸುಮಾರು 65 ಕಿ.ಮೀ ಪ್ರಯಾಣಿಸಿದ್ರು.
ಸಚಿವರಾದ ಜಿ.ಟಿ.ದೇವೆಗೌಡ ಹಾಗೂ ಪುಟ್ಟರಾಜು ಮೊದಲೇ ಖಾಸಗಿ ಕಾರಿನಲ್ಲಿ ಬಂದು ಮೈಸೂರಿನ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇವರೆಲ್ಲರ ಮಧ್ಯೆ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡೀಸ್ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಕಾಂಗ್ರೆಸ್ ಪರಿವರ್ತನಾ ಯಾತ್ರೆ ಮುಗಿಸಿ ಸರ್ಕಾರಿ ಕಾರಿನಲ್ಲೇ ಪ್ರಯಾಣ ಬೆಳೆಸಿದ್ರು. ಇತ್ತ ಸಂಸದ ಪ್ರಹ್ಲಾದ್ ಜೋಶಿ ನೀತಿ ಸಂಹಿತೆ ಜಾರಿ ಬಳಿಕವೂ ಸಾರ್ವಜನಿಕ ಸಭೆ ನಡೆಸಿದ್ರು.
ನೀತಿ ಸಂಹಿತೆ ಜಾರಿ ಬೆನ್ನಲ್ಲೇ ದೇಶಾದ್ಯಂತ ರಸ್ತೆ, ಮಾಲ್, ಅಂಗಡಿ ಸೇರಿ ಹಲವೆಡೆ ಹಾಕಲಾಗಿದ್ದ ರಾಜಕೀಯ ಪಕ್ಷಗಳ ಬ್ಯಾನರ್, ಫ್ಲೆಕ್ಸ್‍ಗಳನ್ನು ಅಧಿಕಾರಿಗಳು ತೆರವುಗೊಳಿಸುತ್ತಿದ್ದಾರೆ. ಮಧ್ಯಪ್ರದೇಶ, ದೆಹಲಿ, ರಾಜಸ್ಥಾನ, ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಲ್ಲಿ ಬ್ಯಾನರ್, ಫ್ಲೆಕ್ಸ್ ಗಳನ್ನು ತೆರವುಗೊಳಿಸುತ್ತಿದ್ದಾರೆ. ಬಾಗಲಕೋಟೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಯೋಜನೆಗಳ ಪರ ಜಾಹೀರಾತು ಹೊಂದಿರುವ ಫ್ಲೆಕ್ಸ್ ಗಳನ್ನು ಕೂಡ ತೆರವು ಮಾಡಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv