ನವದೆಹಲಿ: ಸಿಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್ನ ಒಂದು ಸ್ಥಾನಕ್ಕೆ ಆಗಸ್ಟ್ 11ರಂದು ಉಪಚುನಾವಣೆ ನಡೆಯಲಿದೆ.
ಈ ಬಗ್ಗೆ ಕೇಂದ್ರ ಚುನಾವಣೆ ಆಯೋಗ ದಿನಾಂಕ ಘೋಷಣೆ ಘೋಷಣೆ ಮಾಡಿದೆ. ಆಗಸ್ಟ್ 11ರಂದು ಮತದಾನ, ಅದೇ ದಿನ ಸಂಜೆ ಮತಗಳ ಎಣಿಕೆ ಕಾರ್ಯ ಕೂಡ ನಡೆಯಲಿದೆ. ಇದನ್ನೂ ಓದಿ: ಮಹದಾಯಿ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ- ಸಾಲ ಮರುಪಾವತಿ ಮಾಡಲ್ಲ ಎಂದ ರೈತರು
Advertisement
Advertisement
ನಾಮಪತ್ರ ಸಲ್ಲಿಸಲು ಆಗಸ್ಟ್ 1 ಕೊನೆಯ ದಿನವಾಗಿದೆ. ಆಗಸ್ಟ್ 2ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಆ 4 ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದೆ.
Advertisement
ಕಾಂಗ್ರೆಸ್ನಿಂದ ವಿಧಾನಪರಿಷತ್ ಸದಸ್ಯರಾಗಿದ್ದ ಸಿಎಂ ಇಬ್ರಾಹಿಂ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಸ್ಥಾನ ನೀಡಲಿಲ್ಲ ಎಂದು ತನ್ನ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ಬಳಿಕ ಜೆಡಿಎಸ್ ಸೇರಿದರು.