ನವದೆಹಲಿ: ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ದಿಲೀಪ್ ಘೋಷ್ (Dilip Ghosh) ಮತ್ತು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ (Supriya Shrinate) ಅವರಿಗೆ ಚುನಾವಣಾ ಆಯೋಗ (Election Commission) ಛೀಮಾರಿ ಹಾಕಿದೆ. ಇಬ್ಬರೂ ನಾಯಕರ ಹೇಳಿಕೆಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಆಯೋಗ ಎಚ್ಚರಿಕೆ ನೀಡಿದ್ದು, ಚುನಾವಣಾ ಸಮಯದಲ್ಲಿ ಆಯೋಗವು ಅವರ ಮೇಲೆ ವಿಶೇಷ ನಿಗಾ ಇಡಲಿದೆ ಎಂದು ತಿಳಿಸಿದೆ.
ನೀತಿ ಸಂಹಿತೆ ಉಲ್ಲಂಘಿಸಿ ವೈಯಕ್ತಿಕ ದಾಳಿ ನಡೆಸಿದ ಹಿನ್ನೆಲೆ ಚುನಾವಣಾ ಆಯೋಗ ದಿಲೀಪ್ ಘೋಷ್ ಮತ್ತು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ನೋಟಿಸ್‌ಗೆ ಉತ್ತರಿಸಿದ ಉಭಯ ನಾಯಕರು ನೀತಿ ಸಂಹಿತೆ ಉಲ್ಲಂಘಿಸಿ ವೈಯಕ್ತಿಕ ದಾಳಿ ನಡೆಸಿರುವುದನ್ನು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಕೇಂದ್ರದಿಂದ ಬಿಗ್ ರಿಲೀಫ್ – ಚುನಾವಣೆ ಮುಗಿಯವರೆಗೂ ತೆರಿಗೆ ವಸೂಲಿ ಇಲ್ಲ
Advertisement
Advertisement
ಉತ್ತರವನ್ನು ಸ್ವೀಕರಿಸಿದ ನಂತರ ಆಯೋಗವು ಉಭಯ ನಾಯಕರಿಗೆ ಎಚ್ಚರಿಕೆ ನೀಡಿದ್ದು, ಮುಂದೆ ಇಂತಹ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಎಚ್ಚರಿಕೆ ವಹಿಸಬೇಕು. ಅಲ್ಲದೆ, ಚುನಾವಣಾ ಸಮಯದಲ್ಲಿ ಇಬ್ಬರೂ ನಾಯಕರ ಹೇಳಿಕೆಗಳನ್ನು ಚುನಾವಣಾ ಆಯೋಗವು ವಿಶೇಷವಾಗಿ ಪರಿಶೀಲಿಸುತ್ತದೆ. ಇಬ್ಬರೂ ನಾಯಕರು ಕೀಳು ಮಟ್ಟದ ವೈಯಕ್ತಿಕ ದಾಳಿ ನಡೆಸಿದ್ದು, ಇದು ಮಾದರಿ ನೀತಿ ಸಂಹಿತೆಯ ನಿಬಂಧನೆಗಳ ಉಲ್ಲಂಘನೆಯಾಗಿದೆ ಎಂದು ಆಯೋಗ ಹೇಳಿದೆ.
Advertisement
ಸೋಮವಾರದಿಂದ ಈ ಇಬ್ಬರು ನಾಯಕರ ಚುನಾವಣಾ ಸಂಬಂಧಿತ ಸಂವಹನಗಳ ಮೇಲೆ ಆಯೋಗವು ವಿಶೇಷ ಮತ್ತು ಹೆಚ್ಚುವರಿ ನಿಗಾ ಇರಿಸಲಿದೆ. ಇದೇ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮತ್ತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ತಮ್ಮ ಪಕ್ಷದ ನಾಯಕರಿಗೆ ಎಚ್ಚರಿಕೆ ನೀಡುವಂತೆ ಆಯೋಗವು ಆಯಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಸೂಚನಾ ಪ್ರತಿಯನ್ನು ಕಳುಹಿಸಿದೆ. ಇದನ್ನೂ ಓದಿ: ಕೇಜ್ರಿವಾಲ್‌ಗೆ 15 ದಿನ ನ್ಯಾಯಾಂಗ ಬಂಧನ – ತಿಹಾರ್ ಜೈಲಿಗೆ ಶಿಫ್ಟ್ ಆಗಲಿದ್ದಾರೆ ದೆಹಲಿ ಸಿಎಂ
Advertisement
ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ವಿರುದ್ಧ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ ಸಾಮಾಜಿಕ ಮಾಧ್ಯಮದಲ್ಲಿ ಅಸಭ್ಯವಾಗಿ ಪೋಸ್ಟ್ ಮಾಡಿದ್ದರು. ಇದು ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಟೀಕೆಗೆ ಕಾರಣವಾಗಿತ್ತು. ಬಿಜೆಪಿ ಸಂಸದ ದಿಲೀಪ್ ಘೋಷ್ ಅವರು ಚುನಾವಣಾ ಪ್ರಚಾರದ ವೇಳೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.