ನವದೆಹಲಿ: ಚುನಾವಣಾ ಮಾದರಿ ನೀತಿ ಸಂಹಿತೆ (Code Of Conduct) ಉಲ್ಲಂಘನೆ ಆರೋಪ ಹಿನ್ನೆಲೆ ರೈತ ಬಂಧು ಯೋಜನೆ (Rythu Bandhu Scheme) ಮುಂದೂಡುವಂತೆ ತೆಲಂಗಾಣ (Telangana) ಸರ್ಕಾರಕ್ಕೆ ಕೇಂದ್ರ ಚುನಾವಣಾ ಆಯೋಗ (Election Commission) ಸೂಚನೆ ನೀಡಿದೆ.
ಮತದಾನಕ್ಕೂ (Voting) ಮುನ್ನ ರೈತರ ಅಕೌಂಟ್‌ಗೆ ಹಣ ಹಾಕಿ ಅದರ ಲಾಭ ಪಡೆಯಲು ಬಿಆರ್‌ಎಸ್ (BRS) ಚಿಂತಿಸಿತ್ತು. ಇದಕ್ಕೂ ಮೊದಲು ಯೋಜನೆಗೆ ಅನುಮತಿ ನೀಡಿದ್ದ ಕೇಂದ್ರ ಚುನಾವಣಾ ಆಯೋಗ ಪ್ರಚಾರಕ್ಕೆ ಬಳಸಿಕೊಳ್ಳದಂತೆ ಷರತ್ತು ವಿಧಿಸಿತ್ತು. ಅದಾಗ್ಯೂ ಬಿಆರ್‌ಎಸ್‌ನಿಂದ ಸ್ಪರ್ಧಿಸಿರುವ ರಾಜ್ಯ ಹಣಕಾಸು ಸಚಿವ ಟಿ ಹರೀಶ್ ರಾವ್ ಚುನಾವಣಾ ಪ್ರಚಾರಗಳಿಗೆ ಯೋಜನೆಯನ್ನು ಬಳಸಿಕೊಂಡಿದ್ದರು. ಈ ಬಗ್ಗೆ ಪ್ರತಿಪಕ್ಷಗಳಿಂದ ದೂರು ದಾಖಲಾದ ಹಿನ್ನೆಲೆ ಯೋಜನೆಗೆ ತಾತ್ಕಾಲಿಕ ತಡೆ ನೀಡಿದೆ. ಇದನ್ನೂ ಓದಿ: ಡಿಸೆಂಬರ್ 1ರಿಂದ ಭಾರತೀಯರಿಗೆ ಮಲೇಷ್ಯಾಕ್ಕೆ ವೀಸಾ ಮುಕ್ತ ಪ್ರಯಾಣ
Advertisement
Advertisement
2018ರಲ್ಲಿ ಪ್ರಾರಂಭವಾದ ರೈತ ಬಂಧು ಯೋಜನೆಯು ರೈತರಿಗೆ ಅನಿಶ್ಚಿತತೆಗಳನ್ನು ಪೂರೈಸಲು ಮತ್ತು ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಅನುವು ಮಾಡಿಕೊಡಲು ಒಂದು ಬೆಳೆ ಋತುವಿಗೆ ಎಕರೆಗೆ 5,000 ರೂ. ನಗದು ಹಣವನ್ನು ರೈತರ ಬ್ಯಾಂಕ್ ಖಾತೆಗೆ ಸರ್ಕಾರ ವರ್ಗಾಯಿಸುತ್ತದೆ. ಕೆಲವು ಷರತ್ತುಗಳ ಅಡಿಯಲ್ಲಿ ಅಕ್ಟೋಬರ್-ಜನವರಿ ಅವಧಿಯಲ್ಲಿ ತಮ್ಮ ರಾಬಿ ಬೆಳೆಗಳನ್ನು ಬೆಳೆಯಲು ರೈತರಿಗೆ ಹಣಕಾಸಿನ ನೆರವು ವಿತರಣೆಗಾಗಿ ತೆಲಂಗಾಣ ಸರ್ಕಾರಕ್ಕೆ ಆಯೋಗ ಅನುಮತಿ ನೀಡಿತ್ತು. ಇದನ್ನೂ ಓದಿ: ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ
Advertisement
ನೀತಿ ಸಂಹಿತೆ ಅಸ್ತಿತ್ವಕ್ಕೆ ಬಂದ ನಂತರ ಹಣ ನೀಡಿರುವುದನ್ನು ಪ್ರಚಾರ ಮಾಡದಂತೆ ಚುನಾವಣಾ ಸಂಸ್ಥೆ ರಾಜ್ಯ ಸರ್ಕಾರವನ್ನು ಕೋರಿತ್ತು. ಆದರೆ ಹಲವು ನಾಯಕರು ಈ ಬಗ್ಗೆ ಉಲ್ಲೇಖಿಸಿದ ಹಿನ್ನೆಲೆ ಯೋಜನೆಯಡಿ ಯಾವುದೇ ವಿತರಣೆಯನ್ನು ನೀಡದಂತೆ ತೆಲಂಗಾಣ ಸರ್ಕಾರಕ್ಕೆ ಆಯೋಗ ಆದೇಶಿಸಿದೆ. ಸೋಮವಾರ ಮಧ್ಯಾಹ್ನ 3 ಗಂಟೆಯೊಳಗೆ ಅನುಪಾಲನಾ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ. ಇದನ್ನೂ ಓದಿ: Constitution Day: ರಾಷ್ಟ್ರಪತಿಯಿಂದ ಸುಪ್ರೀಂ ಕೋರ್ಟ್ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ
Advertisement
119 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ತೆಲಂಗಾಣದಲ್ಲಿ ನವೆಂಬರ್ 30 ರಂದು ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಬಿಆರ್‌ಎಸ್, ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನಡುವೆ ಮೂರು ಪಕ್ಷಗಳ ತೀವ್ರ ಪೈಪೋಟಿ ಕಂಡುಬರುವ ನಿರೀಕ್ಷೆಯಿದೆ. ಇದನ್ನೂ ಓದಿ: ಚೀನಾದಲ್ಲಿ ಮತ್ತೊಂದು ವೈರಸ್; ಆಸ್ಪತ್ರೆಗಳಲ್ಲಿ ತುರ್ತುಕ್ರಮ ಪರಿಶೀಲಿಸುವಂತೆ ರಾಜ್ಯಗಳಿಗೆ ಖಡಕ್ ವಾರ್ನಿಂಗ್