ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ (Rahul Gandhi) ಕೇಂದ್ರ ಚುನಾವಣಾ ಆಯೋಗದಿಂದ (Central Election Commission) ನೋಟಿಸ್ ನೀಡಲಾಗಿದೆ.
ಪ್ರಧಾನಿ ವಿರುದ್ಧ ನೀಡಿರುವ ಹೇಳಿಕೆ ಸಂಬಂಬಂಧ ಬಿಜೆಪಿ ಕೇಂದ್ರ ಚುನಾವಣಾ ಆಯೋಗದ ಮೆಟ್ಟಿಲೇರಿತ್ತು. ಪ್ರಧಾನಿಯೊಬ್ಬರನ್ನು ಜೇಬುಗಳ್ಳ ಮತ್ತು ಅಪಶಕುನಕ್ಕೆ ಹೋಲಿಸುವುದು ಸರಿಯಲ್ಲ. ಇದು ರಾಜಕೀಯ ಚರ್ಚೆಯ ಮಟ್ಟ ಹದಗೆಡುತ್ತಿರುವುದರ ಸಂಕೇತವಾಗಿದೆ. ಯಾವುದೇ ವ್ಯಕ್ತಿಯನ್ನು ಜೇಬುಗಳ್ಳರೆಂದು ಕರೆಯುವುದು ಕೆಟ್ಟ ನಿಂದನೆ ಮತ್ತು ವೈಯಕ್ತಿಕ ದಾಳಿಗೆ ಸಮವಾಗಿರುತ್ತದೆ. ಅವರ ಪ್ರತಿಷ್ಠೆಗೆ ಹಾನಿ ಮಾಡುವ ಮತ್ತು ಸಾರ್ವಜನಿಕರನ್ನು ತಪ್ಪುದಾರಿಗೆಳೆಯುವ ಸ್ಪಷ್ಟ ಉದ್ದೇಶದಿಂದ ಅಂತಹ ಹೇಳಿಕೆಯನ್ನು ನೀಡಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
Election Commission of India issues notice to Congress MP Rahul Gandhi on his 'panauti' and 'pickpocket' jibes at PM Modi, asks him to respond by 25th November pic.twitter.com/CcrIlU6I9o
— ANI (@ANI) November 23, 2023
ಈ ಹಿನ್ನೆಲೆಯಲ್ಲಿ ಇದೀಗ ರಾಗಾಗೆ ನೋಟಿಸ್ ನೀಡಲಾಗಿದ್ದು, ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ನೀಡಿದ್ದ ಹೇಳಿಕೆಗೆ ನವೆಂಬರ್ 25 ಒಳಗೆ ಸ್ಪಷ್ಟನೆ ನೀಡುವಂತೆ ನೋಟಿಸ್‍ನಲ್ಲಿ ಸೂಚಿಸಲಾಗಿದೆ. ಇದನ್ನೂ ಓದಿ: ಪಾಪಿಗಳು ಹಾಜರಾದ ಫೈನಲ್ ಹೊರತುಪಡಿಸಿ ಎಲ್ಲಾ ಪಂದ್ಯಗಳನ್ನು ಟೀಂ ಇಂಡಿಯಾ ಗೆದ್ದಿದೆ: ಮಮತಾ ಕಿಡಿ
ರಾಹುಲ್ ಹೇಳಿದ್ದೇನು..?; ರಾಜಸ್ಥಾನ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ರಾಹುಲ್ ಗಾಂಧಿ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಮೋದಿ ಪನೋತಿ (ಅಪಶಕುನ) ಮತ್ತು ಜೇಬುಗಳ್ಳ ಎಂದಿದ್ದರು. ನಮ್ಮ ಹುಡುಗರು ಬಹುತೇಕ ವಿಶ್ವಕಪ್ ಗೆಲ್ಲುತ್ತಿದ್ದರು. ವಿಶ್ವಕಪ್ ಗೆಲ್ಲುವ ಹುಮ್ಮಸ್ಸಿನಲ್ಲಿಯೇ ಅಖಾಡಕ್ಕಿಳಿದಿದ್ದರು. ಆದರೆ ಕೆಟ್ಟ ಶಕುನವೊಂದು ಮೈದಾನ ಪ್ರವೇಶಿಸಿದ ಪರಿಣಾಮ ಕಪ್ ಕಳೆದುಕೊಳ್ಳುವಂತೆ ಮಾಡಿದೆ. ಅಲ್ಲದೇ ರಾಹುಲ್ ಗಾಂಧಿಯವರು ಜನರಿಂದಲೂ ಅಪಶುಕುನ ಎನ್ನುವ ಪದ ಹೇಳಿಸಿದ್ದರು. ರಾಹುಲ್ ಗಾಂಧಿಯವರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು.
ಅಹಮದಾಬಾದ್‍ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಕ್ರಿಕೆಟ್ ವರ್ಲ್ಡ್ ಕಪ್ (World Cup 2023) ನಲ್ಲಿ ಆಸ್ಟ್ರೇಲಿಯಾ (Australia) ಮುಂದೆ ಭಾರತ ಫೈನಲ್ ಪಂದ್ಯವಿತ್ತು. ಈ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಸಿನಿ ತಾರೆಯರು ಕೂಡ ಭಾಗಿಯಾಗಿದ್ದರು. ಈ ಮ್ಯಾಚ್‍ನಲ್ಲಿ ಆಸೀಸ್ ಮುಂದೆ ಭಾರತ ಸೋಲು ಕಂಡಿತ್ತು. ಇದಾದ ಬಳಿಕ ಟೀಂ ಇಂಡಿಯಾ ಆಟಗಾರರಿದ್ದ ಡ್ರೆಸ್ಸಿಂಗ್ ರೂಮ್‍ಗೆ ತೆರಳಿದ್ದ ಮೋದಿ ಅವರನ್ನು ಸಮಾಧಾನ ಪಡಿಸಿದ್ದರು. ಅಲ್ಲದೆ ನಿಮ್ಮ ಜೊತೆ ನಾವು ಇರುತ್ತೇವೆ ಎಂದು ಧೈರ್ಯ ತುಂಬಿದ್ದರು.