ಬಿಹಾರ ಕರಡು ಮತದಾರರ ಪಟ್ಟಿ ಔಟ್‌

Public TV
1 Min Read
voters list election

ನವದೆಹಲಿ: ಬಿಹಾರದ (Bihar) ಮತದಾರರ ಪಟ್ಟಿ ಪರಿಷ್ಕರಣೆ ಭಾರೀ ಕೋಲಾಹಲಕ್ಕೆ ಕಾರಣವಾಗಿದೆ. ಕೇಂದ್ರ ಚುನಾವಣಾ ಆಯೋಗದ (Union Election Commission) ವೋಟರ್ ಲಿಸ್ಟ್ ಪರಿಷ್ಕರಣೆ ಇಂಡಿ ಒಕ್ಕೂಟದ ಕೆಂಗಣ್ಣಿಗೆ ಗುರಿಯಾಗಿದೆ.

ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ನಂತರ ಕರಡು ಮತದಾರರ ಪಟ್ಟಿಯನ್ನು ರಿಲೀಸ್ ಮಾಡಿದೆ. ಪರಿಷ್ಕೃತ ಮತದಾರರ ಪಟ್ಟಿ ಕುರಿತು ಆಕ್ಷೇಪಣೆಗೆ ಚುನಾವಣಾ ಆಯೋಗ ಆಹ್ವಾನಿಸಿದೆ. ಇದನ್ನೂ ಓದಿ: ಪಾಕ್‌ ಬೆಂಬಲಿಸಿದ ಟರ್ಕಿಗೆ ಶಾಕ್‌ – ಭಾರತೀಯ ಪ್ರವಾಸಿಗರ ಸಂಖ್ಯೆ ಭಾರೀ ಕುಸಿತ


ಒಂದು ತಿಂಗಳುಗಳ ಕಾಲ ಕಾಲಾವಕಾಶ ನೀಡಿದೆ. ಮತದಾರರ ಪಟ್ಟಿ ಪರಿಷ್ಕರಣೆಗೂ ಮುನ್ನ ಒಟ್ಟು 7.93 ಕೋಟಿ ನೋಂದಾಯಿತ ಮತದಾರರು ಇದ್ದರು. ಈಗ ಎಷ್ಟಿದ್ದಾರೆ ಅನ್ನೋದು ಗೊತ್ತಾಗಬೇಕಿದೆ. ತಪ್ಪಾಗಿ ಮತದಾರರನ್ನು ಪಟ್ಟಿಯಿಂದ ಕೈಬಿಟ್ಟಿದ್ದರೆ ಮತ್ತೆ ಮರು ಸೇರ್ಪಡೆಗೆ ಚುನಾವಣಾ ಆಯೋಗ ಅವಕಾಶ ನೀಡಿದೆ.

ವರ್ಷಾಂತ್ಯದಲ್ಲಿ ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ಸೇರಿದಂತೆ ಇಂಡಿ ಒಕ್ಕೂಟ ಸಂಸತ್ ಹೊರಗೂ, ಒಳಗೂ ನಿರಂತರ ಪ್ರತಿಭಟನೆ ಮಾಡುತ್ತಿದೆ. ಲೋಕಸಭೆಯಲ್ಲಿ ಚರ್ಚಿಸಲು ಇಂಡಿ ಒಕ್ಕೂಟದ ನಾಯಕರು ಸ್ಪೀಕರ್ ಬಿರ್ಲಾಗೆ ಪತ್ರ ಬರೆದಿದ್ದಾರೆ.

Share This Article