ಬೆಂಗಳೂರು: ಶಾಸಕ ಎಂ.ಪಿ ರೇಣುಕಾಚಾರ್ಯ (MP Renukacharya) ಅವರಿಗೆ ಚುನಾವಣಾಧಿಕಾರಿಗಳು ಭಾನುವಾರ ಬಿಸಿ ಮುಟ್ಟಿಸಿದ್ದಾರೆ.
ಕೇಂದ್ರ ಚುನಾವಣಾ ಆಯೋಗವು (Election Commission of India) ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟಿಸುತ್ತಿದ್ದಂತೆ, ನೀತಿ ಸಂಹಿತೆ (Code Of Conduct) ಜಾರಿಗೊಂಡಿದೆ. ಇದರ ಹೊರತಾಗಿಯೂ ರೇಣುಕಾಚಾರ್ಯ ಅವರು ಚುನಾವಣಾಧಿಕಾರಿಗಳ ಅನುಮತಿಯಿಲ್ಲದೆ ಭಾನುವಾರ ಬೆಂಗಳೂರಿನ (Bengaluru) ಗುರುರಾಜ ಕಲ್ಯಾಣಮಂಟಪದಲ್ಲಿ ಸಭೆ ನಡೆಸಿದ್ದಾರೆ. ಇದನ್ನೂ ಓದಿ: ಮತ್ತೆ ರಾಜ್ಯಕ್ಕೆ ಮೋದಿ – ಕಾಂಗ್ರೆಸ್, ಜೆಡಿಎಸ್ ಭದ್ರಕೋಟೆಯಲ್ಲೇ ನಡೆಯಲಿದೆ ಸಮಾವೇಶ
Advertisement
Advertisement
ಸಭೆ ನಡೆಸಲು ಚುನಾವಣಾ ಆಯೋಗ ಹಾಗೂ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಗುರುರಾಜ ಕಲ್ಯಾಣ ಮಂಟಪಕ್ಕೆ ಎಂಟ್ರಿ ಕೊಟ್ಟು ಕಾರ್ಯಕ್ರಮ ನಿಲ್ಲಿಸಲು ಮುಂದಾಗಿದ್ದಾರೆ. ಅಧಿಕಾರಿಗಳು ಭೇಟಿ ನೀಡಿದ ಬಳಿಕವೂ ರೇಣುಕಾಚಾರ್ಯ ಅವರು ಮಾತು ಮುಂದುವರಿಸಲು ಯತ್ನಿಸಿದಾಗ ಅಧಿಕಾರಿಗಳು ಮೈಕ್ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲಿ ರೇಣುಕಾಚಾರ್ಯ ಅವರು ಸರ್ ಇರಿ ಸ್ವಲ್ಪ ಇರಿ ಅಂತಾ ಭಾಷಣ ಮುಂದುವರಿಸಿದ್ದಾರೆ. ಬಳಿಕ ನೆರೆದಿದ್ದ ಸಭೀಕರಿಗೆ ನೀತಿ ಸಂಹಿತೆ ಉಲ್ಲಂಘನೆಯಾಗುತ್ತೆ ಅಂತಾ ಹೇಳಿ ಕಾರ್ಯಕ್ರಮವನ್ನ ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ.
Advertisement
Advertisement
ಸಭೆಯ ಸಂಪೂರ್ಣ ವೀಡಿಯೋ ಮಾಡಿಕೊಂಡಿರುವ ಚುನಾವಣಾಧಿಕಾರಿಗಳು ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆ ಕೇಸ್ ಹಾಕಲು ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಸ್ಮಶಾನದಲ್ಲಿ ಪೂಜೆ ಮಾಡಿ ಚುನಾವಣಾ ಪ್ರಚಾರ ವಾಹನಕ್ಕೆ ಚಾಲನೆ: ಸತೀಶ್ ಜಾರಕಿಹೊಳಿ