ನವದೆಹಲಿ: ಕೇಂದ್ರ ಚುನಾವಣಾ ಆಯೋಗವು (Election Commission) ಆಮ್ ಆದ್ಮಿ ಪಕ್ಷಕ್ಕೆ (AAP) ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಿದೆ.
ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC), ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ (NCP) ಹಾಗೂ ಸಿಪಿಐ ಪಕ್ಷಗಳು ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಕಳೆದುಕೊಂಡಿವೆ. ಇದನ್ನೂ ಓದಿ: Twitter ನಲ್ಲಿ ಮೋದಿ ಫಾಲೋ ಮಾಡ್ತಿರುವ ಮಸ್ಕ್ – ಭಾರತಕ್ಕೆ ಬರುತ್ತೆ ಟೆಸ್ಲಾ ಎಂದ ನೆಟ್ಟಿಗರು!
Advertisement
इतने कम समय में राष्ट्रीय पार्टी? ये किसी चमत्कार से कम नहीं। सबको बहुत बहुत बधाई
देश के करोड़ों लोगों ने हमें यहाँ तक पहुँचाया। लोगों को हमसे बहुत उम्मीद है। आज लोगों ने हमें ये बहुत बड़ी ज़िम्मेदारी दी है
हे प्रभु, हमें आशीर्वाद दो कि हम ये ज़िम्मेदारी अच्छे से पूरी करें
— Arvind Kejriwal (@ArvindKejriwal) April 10, 2023
Advertisement
ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆಯಲು, ಕನಿಷ್ಠ 4 ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿ ಗುರುತಿಸಿಕೊಂಡಿರಬೇಕು. ಆ ರಾಜ್ಯಗಳ ವಿಧಾನಸಭೆಯಲ್ಲಿ ಕನಿಷ್ಠ ಇಬ್ಬರು ಸದಸ್ಯರನ್ನ ಹೊಂದಿರಬೇಕು. ಅಥವಾ ಲೋಕಸಭೆಯಲ್ಲಿ ಕನಿಷ್ಠ ಶೇ.2 ರಷ್ಟು ಸದಸ್ಯ ಬಲವನ್ನ ಹೊಂದಿರಬೇಕು. ಇದನ್ನೂ ಓದಿ: ಖಲಿಸ್ತಾನಿ ಕೃತ್ಯ ಖಂಡಿಸದ ಯುಕೆ – ವ್ಯಾಪಾರ ಮಾತುಕತೆ ಸ್ಥಗಿತಗೊಳಿಸಿದ ಭಾರತ
Advertisement
Advertisement
ಎಎಪಿ ದೆಹಲಿ, ಪಂಜಾಬ್ ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಗೋವಾ ಮತ್ತು ಗುಜರಾತ್ ರಾಜ್ಯಗಳಲ್ಲಿ ಇಬ್ಬರಿಗಿಂತ ಹೆಚ್ಚಿನ ಶಾಸಕರನ್ನ ಹೊಂದಿದೆ. ಈ ಕಾರಣಕ್ಕಾಗಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಲಾಗಿದೆ. ಮುಖ್ಯವಾಗಿ ಎಎಪಿ ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಪ್ರತಿನಿಧಿಸುತ್ತಿದೆ.