– ಅಧಿಕಾರಿಗಳಿಗೆ ಸಹಕಾರ ನೀಡಿ ಕರ್ತವ್ಯನಿಷ್ಠೆ ಮೆರೆದ ಸಿದ್ದರಾಮಯ್ಯ
ಕೋಲಾರ: ಮದುವೆ ಆರತಕ್ಷತೆಗೆ ತೆರಳುತ್ತಿದ್ದ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಕಾರನ್ನು ಅಧಿಕಾರಿಗಳು ತಡೆದು ಪರಿಶೀಲಿಸಿದ ಘಟನೆ ಜಿಲ್ಲೆಯ ರಾಮಸಂದ್ರ ಬಳಿ ನಡೆದಿದೆ.
ಕೋಲಾರ (Kolar) ನಗರದ ಹೊರಭಾಗದಲ್ಲಿರುವ ಖಾಸಗಿ ಕಲ್ಯಾಣ ಮಂಟಪದಲ್ಲಿ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದರು. ಈ ವೇಳೆ ಅವರ ಕಾರನ್ನು ಕೋಲಾರ ಜಿಲ್ಲೆಯ ಗಡಿಯಲ್ಲಿ ಸ್ಥಾಪಿಸಲಾದ ರಾಮಸಂದ್ರ ಚೆಕ್ ಪೋಸ್ಟ್ ಬಳಿ ಪೋಲೀಸರು ತಪಾಸಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಮತ್ತೆ ಮೋದಿಯನ್ನ ಪ್ರಧಾನಿ ಮಾಡೋದು ಪರಿಶಿಷ್ಟರ ಸಂಕಲ್ಪ: ಪ್ರಹ್ಲಾದ್ ಜೋಶಿ
ಇದಕ್ಕೆ ಕಿಂಚಿತ್ತೂ ಬೇಸರಿಸಿಕೊಳ್ಳದ ಸಿಎಂ, ತಪಾಸಣೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಈ ವೇಳೆ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್ ಸುರೇಶ್ ಸಹ ಅವರ ಜೊತೆಗಿದ್ದರು. ಬಳಿಕ ಅವರು ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಿಎಂ ಸಿದ್ದರಾಮಯ್ಯ ವಾಪಸ್ ಬೆಂಗಳೂರಿಗೆ ತೆರಳಿದ್ದಾರೆ.
ಲೋಕಸಭಾ ಚುನಾವಣೆಯನ್ನು (Lok Sabha Election 2024) ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸುವ ಉದ್ದೇಶದಿಂದ ಚುನಾವಣಾಧಿಕಾರಿಗಳ ತಂಡ ಎಲ್ಲೆಡೆ ಕಾರ್ಯನಿರ್ವಹಿಸುತ್ತಿದೆ. ಪ್ರತಿ ವಾಹನವನ್ನು ಸಮಗ್ರವಾಗಿ ತಪಾಸಣೆಗೆ ಒಳಪಡಿಸಬೇಕು ಎಂಬ ಆದೇಶದ ಮೇರೆಗೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ. ಇದನ್ನೂ ಓದಿ: ಮತ್ತೆ ಮೋದಿಯನ್ನ ಪ್ರಧಾನಿ ಮಾಡೋದು ಪರಿಶಿಷ್ಟರ ಸಂಕಲ್ಪ: ಪ್ರಹ್ಲಾದ್ ಜೋಶಿ