ನವದೆಹಲಿ: ಫೆಬ್ರವರಿ ಮತ್ತು ಮಾರ್ಚ್‍ನಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭೆಗೆ ಇಂದು ಚುನಾವಣಾ ದಿನಾಂಕ ನಿಗಧಿಯಾಗಲಿದೆ. ಮಧ್ಯಾಹ್ನ 3:30 ಕ್ಕೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದ್ದು ಐದು ರಾಜ್ಯಗಳಿಗೆ ಚುನಾವಣಾ ದಿನಾಂಕ ಪ್ರಕಟಿಸಲಿದೆ.
ಫೆಬ್ರವರಿ ಮಾರ್ಚ್ ವೇಳೆಗೆ ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತಾರಖಂಡ್‍ಗೆ ಚುನಾವಣೆ ನಡೆಯಬೇಕಿದೆ. ಈಗಾಗಲೇ ಕೇಂದ್ರ ಚುನಾವಣಾ ಆಯೋಗವು ಕೂಡಾ ಸಾಕಷ್ಟು ತಯಾರಿ ಮಾಡಿಕೊಂಡಿದೆ. ಇದನ್ನೂ ಓದಿ: ಅಧಿಕಾರದಲ್ಲಿದ್ದಾಗ ಕುಂಭಕರ್ಣ ನಿದ್ದೆ, ಈಗ ಮೇಕೆದಾಟು ಹೋರಾಟ: ಡಿಕೆಶಿಗೆ ಕಾರಜೋಳ ಟಾಂಗ್
Advertisement
Advertisement
ಕೊರೊನಾ ಮೂರನೇ ಅಲೆ ಹೆಚ್ಚುತ್ತಿರುವ ಹಿನ್ನಲೆ ಚುನಾವಣೆ ಮುಂದೂಡಬೇಕು ಎನ್ನುವ ಒತ್ತಡ ಕೇಳಿ ಬಂದಿತ್ತು. ಈ ಸಂಬಂಧ ರಾಜಕೀಯ ಪಕ್ಷಗಳ ಜೊತೆಗೆ ಆಯೋಗ ಸಭೆ ನಡೆಸಿತ್ತು. ಅಲ್ಲದೇ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಚುನಾವಣೆ ನಡೆಸುವ ಸಾಧ್ಯತೆಗಳ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮತ್ತು ಗೃಹ ಇಲಾಖೆಯ ಜೊತೆಗೂ ಮುಖ್ಯ ಆಯುಕ್ತ ಸುಶೀಲ್ ಚಂದ್ರ ಸಭೆ ನಡೆಸಿದ್ದರು. ಇದನ್ನೂ ಓದಿ: ಕೊರೊನಾ ನಿಯಮ ಉಲ್ಲಂಘಿಸಿ ಹೋರಾಟ ಮಾಡ್ಬೇಡಿ – ಕಾಂಗ್ರೆಸ್‍ಗೆ ಕಾರಜೋಳ ಮನವಿ
Advertisement
ಸಭೆಯಲ್ಲಿ ರಾಜಕೀಯ ಪಕ್ಷಗಳು ನಿಗಧಿತ ಅವಧಿಯಲ್ಲಿ ಚುನಾವಣೆ ನಡೆಯಬೇಕು ಎಂದು ಮನವಿ ಮಾಡಿವೆ. ಅಲ್ಲದೇ ವ್ಯಾಕ್ಸಿನೇಷನ್ ಹೆಚ್ಚಿಸುವ ಮೂಲಕ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವ ಮೂಲಕ ಚುನಾವಣೆ ನಡೆಸಲು ಸಾಧ್ಯವಿದೆ ಎಂದು ಆರೋಗ್ಯ ಮತ್ತು ಗೃಹ ಇಲಾಖೆಯ ಅಧಿಕಾರಿಗಳು ಭರವಸೆ ನೀಡಿದ ಬಳಿಕ ಆಯೋಗ ದಿನಾಂಕ ಪ್ರಕಟಿಸಲು ತಿರ್ಮಾನಿಸಿದೆ.
Advertisement
ಉತ್ತರ ಪ್ರದೇಶದಲ್ಲಿ 403 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 6-7 ಹಂತಗಳಲ್ಲಿ ಮತದಾನ ನಡೆಯಬಹುದು ಎನ್ನಲಾಗಿದೆ. ಪಂಜಾಬ್ ನ 117, ಉತ್ತರಾಖಂಡ 70, ಗೋವಾದ 40 ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಬಹುದು ಎನ್ನಲಾಗಿದ್ದು, ಮಣಿಪುರದ 60 ಸ್ಥಾನಗಳಿಗೆ ಭದ್ರತೆ ಕಾರಣಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಬಹುದು ಎಂದು ಮೂಲಗಳು ಹೇಳಿವೆ.