ಬೆಂಗಳೂರು: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣೆ ನಡೆದಿದ್ದು, ಈಗ ಕರ್ನಾಟಕದಲ್ಲಿ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ.
2018ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬರೋಬ್ಬರಿ 320 ಕೋಟಿ ರೂಪಾಯಿ ವೆಚ್ಚವಾಗಲಿದೆ. ಹೀಗಾಗಿ ಆದಷ್ಟು ಶೀಘ್ರವಾಗಿ ಹಣ ಬಿಡುಗಡೆ ಮಾಡುವಂತೆ ರಾಜ್ಯ ಚುನಾವಣಾ ಆಯುಕ್ತರು ಹಣಕಾಸು ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.
Advertisement
Advertisement
ಈ ಬಾರಿ ಮತಗಟ್ಟೆಗಳಲ್ಲಿ ವಿವಿಪಿಎಟಿ ಅಳವಡಿಸಿದ ಇವಿಎಂ ಬಳಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಮತಗಟ್ಟೆಗಳ ಸಂಖ್ಯೆಯೂ ಹೆಚ್ಚಾಗಲಿದ್ದು, ಹಣದುಬ್ಬರ, ಬೆಲೆ ಏರಿಕೆಯಿಂದ ಖರ್ಚು ಹೆಚ್ಚಾಗಲಿದೆ ಎಂದು ಚುನಾವಣಾ ಆಯೋಗದ ಮೂಲಗಳು ಹೇಳಿವೆ.
Advertisement
ಹಿಂದಿನ ಬಾರಿ ಚುನಾವಣೆಗೆ ಸುಮಾರು 54,261 ಮತಗಟ್ಟೆಗಳು ಇದ್ದವು. ಆದರೆ ಈ ಬಾರಿಯ ಚುನಾವಣೆಯಲ್ಲಿ ಸುಮಾರು 57,000 ಮತಗಟ್ಟೆಗಳು ಇರಲಿವೆ. ಇನ್ನು ಮತದಾರರ ಸಂಖ್ಯೆಯೂ 4.9 ಕೋಟಿಗೆ ಏರಿಕೆಯಾಗಿದೆ ಎಂದು ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ.