ಬೆಂಗಳೂರು: ರಾಜ್ಯ ಸರ್ಕಾರ ಸೋಮವಾರ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ 7 ಮಂದಿ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿ ಹೊರಡಿಸಿದ್ದ ಆದೇಶಕ್ಕೆ ಚುನಾವಣಾ ಆಯೋಗ ಆಕ್ಷೇಪ ವ್ಯಕ್ತಪಡಿಸಿದೆ.
ಚುನಾವಣಾ ಪ್ರಕ್ರಿಯೆ ಮುಗಿಯುವರೆಗೂ ಯಾವುದೇ ಅಧಿಕಾರಿಗಳನ್ನು ವರ್ಗಾಯಿಸುವಂತಿಲ್ಲ ಎಂದು ಜನವರಿ 17 ರಂದು ರಾಜ್ಯಸರ್ಕಾರಕ್ಕೆ ಚುನಾವಣಾ ಆಯೋಗ ಪತ್ರ ಬರೆದಿತ್ತು. ಅದರೆ ಸರ್ಕಾರ ಸೋಮವಾರ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಆದೇಶಿದೆ. ಈ ಸಂಬಂಧ ಮಂಗಳವಾರ ವರ್ಗಾವಣೆ ಆದೇಶ ಹೊರಡಿಸಿದ್ದು ಯಾಕೆ ಎಂದು ಪ್ರಶ್ನಿಸಿ ವಿವರಣೆ ನೀಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಅವರಿಗೆ ಚುನಾವಣಾ ಆಯೋಗ ಪತ್ರ ಬರೆದಿದೆ. ಇದನ್ನೂ ಓದಿ: ರಾಜಕೀಯದಿಂದ ದೂರ ಉಳಿದು ಉತ್ತಮ ಆಡಳಿತ ನೀಡುವುದಷ್ಟೇ ನನ್ನ ಗುರಿ: ಹಾಸನ ಡಿಸಿ ರೋಹಿಣಿ ಸಿಂಧೂರಿ

ಆಯೋಗದ ಪತ್ರದಲ್ಲಿ ಏನಿದೆ?
ಫೆಬ್ರವರಿ 28ಕ್ಕೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಲಿದ್ದು, ಮತದಾರ ಪಟ್ಟಿ ಪರಿಷ್ಕರಣೆ ಮುಗಿಯುವವರೆಗೆ ವರ್ಗಾವಣೆ ಬೇಡ. ವರ್ಗಾವಣೆ ಆದೇಶ ಜಾರಿಯನ್ನು ಕೂಡಲೇ ನಿಲ್ಲಿಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿರುವವರನ್ನ ಅದೇ ಸ್ಥಾನದಲ್ಲಿ ಮುಂದುವರಿಸಬೇಕು. ವರ್ಗಾವಣೆ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರಬೇಕು. ವರ್ಗಾಯಿತ ಜಿಲ್ಲೆಗಳಿಗೆ ತೆರಳದಂತೆ 7 ಜಿಲ್ಲಾಧಿಕಾರಿಗಳಿಗೂ ಆಯೋಗ ಸೂಚನೆ ನೀಡಿದೆ. ಇದನ್ನೂ ಓದಿ: ಹಣ ಹೊಡೆಯಲು ಬಿಟ್ಟಿಲ್ಲ ಅಂತ ಹೆಣ್ಮಗಳ ವರ್ಗ, ಸಿಎಂ ಜೊತೆ ವೇದಿಕೆ ಏರಲ್ಲ- ಸರ್ಕಾರಕ್ಕೆ ಥೂ ಎಂದು ಉಗಿದ ಹೆಚ್‍ಡಿಡಿ








