ನವದೆಹಲಿ: ಲೋಕಸಭೆ ಚುನಾವಣೆ (Lok Sabha Elections 2024) ಹೊತ್ತಲ್ಲೇ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಚುನಾವಣಾ ಆಯುಕ್ತ ಅರುಣ್ ಗೋಯೆಲ್ (Arun Goel) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಗೋಯೆಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ. ಭಾರತೀಯ ಚುನಾವಣಾ ಆಯೋಗವು (Election Commissioner) ಈಗಾಗಲೇ ಖಾಲಿ ಹುದ್ದೆಯನ್ನು ಹೊಂದಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ಬಳಿ ಮಾತ್ರ ಉಳಿದಿದೆ. ಇದನ್ನೂ ಓದಿ: ಬಿಜೆಪಿ ಜೊತೆ ಕೈಜೋಡಿಸಿದ ಟಿಡಿಪಿ, ಜೆಎಸ್‌ಪಿ – ಆಂಧ್ರದ ಲೋಕಸಭಾ, ವಿಧಾನಸಭಾ ಚುನಾವಣೆಗೆ ಮೈತ್ರಿ ಸ್ಪರ್ಧೆ
Advertisement
Advertisement
ಲೋಕಸಭೆ ಚುನಾವಣೆ ದಿನಾಂಕವನ್ನು ಮುಂದಿನ ವಾರ ಘೋಷಿಸುವ ಸಾಧ್ಯತೆಯಿದೆ. ಗೋಯೆಲ್ ಅವರ ರಾಜೀನಾಮೆ ಈಗ ಆ ಟೈಮ್‌ಲೈನ್‌ನಲ್ಲಿ ಪ್ರಶ್ನಾರ್ಥಕ ಚಿಹ್ನೆಯನ್ನು ಹಾಕಿದೆ.
Advertisement
Advertisement
ಗೋಯಲ್ ಅವರು 1985 ರ ಬ್ಯಾಚ್ ಐಎಎಸ್ ಅಧಿಕಾರಿ. 2022 ರ ನವೆಂಬರ್ 18 ರಂದು ಸ್ವಯಂ ನಿವೃತ್ತಿ ಪಡೆದಿದ್ದರು. ಒಂದು ದಿನದ ನಂತರ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದರು. ಅವರ ನೇಮಕವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಇದನ್ನೂ ಓದಿ: ಲೋಕಸಭೆಯಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ – ಇಂಡಿಯಾ ಒಕ್ಕೂಟ ಸೇರುವ ವದಂತಿಗೆ ಮಾಯಾವತಿ ಸ್ಪಷ್ಟನೆ