ಮಂಡ್ಯ: ಮತದಾರರಿಗೆ ಹಂಚುತ್ತಿದ್ದ ಕೋಳಿಗಳನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಮಲ್ಲೇಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಲಗೇಜ್ ಆಟೋದಲ್ಲಿ ಕೋಳಿ ತಂದು ಮನೆ ಮನೆಗೆ ಹಂಚಲಾಗುತ್ತಿತ್ತು. ಇದನ್ನು ತಿಳಿದು ಸ್ಥಳೀಯರಲ್ಲೇ ಒಬ್ಬರು ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಿಷ್ಯ ತಿಳಿದು ಸ್ಥಳಕ್ಕೆ ಆಗಮಿಸಿದ ಚುನಾವಣಾ ಅಧಿಕಾರಿಗಳು ಲಗೇಜ್ ಆಟೋ ಸಹಿತ ಕೋಳಿಗಳನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಮತದಾರರಿಗೆ ಹಂಚಿಕೆ ಮಾಡಲು ಸಂಗ್ರಹಿಸಿದ್ದ ಗೃಹೋಪಯೋಗಿ ವಸ್ತುಗಳು ವಶ
ಅಷ್ಟೇ ಅಲ್ಲದೆ ಈಗಾಗಲೇ ಕೋಳಿಗಳನ್ನು ಪಡೆದಿದ್ದವರಿಂದಲೂ ಅವುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇನ್ನು ಕೋಳಿ ಹಂಚಲು ಹೇಳಿದ್ದು ಯಾರು.? ಯಾವ ಪಕ್ಷದ ಅಭ್ಯರ್ಥಿ ಕೋಳಿ ಹಂಚಲು ಸೂಚಿಸಿದ್ದು ಎಂಬ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.