– ಮತದಾನ ಜಾಗೃತಿಗೆ ಸೈಕಲ್ ಜಾಥಾ
ಬೆಂಗಳೂರು: ಏ.26 ರಂದು ನಡೆಯುವ ಮತದಾನದ ಹಬ್ಬವನ್ನು ಎಲ್ಲರೂ ಸೇರಿ ಒಟ್ಟಾಗಿ ಆಚರಿಸೋಣ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಕರೆಕೊಟ್ಟಿದ್ದಾರೆ.
Advertisement
Advertisement
ನಗರದಲ್ಲಿ, ಲೋಕಸಭಾ ಚುನಾವಣೆಯ ( Lok Sabha Election 2024) ಅಂಗವಾಗಿ ಚುನಾವಣಾ ಆಯೋಗ (Election Commission), ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಯೂನಿಯನ್ ಬ್ಯಾಂಕ್ ಸಹಯೋಗದಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮುಂಭಾಗ ಗುರುವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿಯ (Voting Awareness) ಸೈಕಲ್ ಜಾಥಾ (ಸೈಕ್ಲೋಥಾನ್)ಗೆ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ದಕ್ಷಿಣ ಕರ್ನಾಟಕದಲ್ಲಿ ಏಪ್ರಿಲ್ 26 ರಂದು ಹಾಗೂ ಉತ್ತರ ಕರ್ನಾಟಕದಲ್ಲಿ ಮೇ.7 ರಂದು ಮತದಾನ ನಡೆಯುತ್ತಿದೆ. ಮತ ಚಲಾಯಿಸಲು ಅರ್ಹರಿರುವ ಎಲ್ಲರೂ ತಪ್ಪದೆ ಮತ ಚಲಾಯಿಸೋಣ ಎಂದರು. ಇದನ್ನೂ ಓದಿ: ಸ್ವಾಮೀಜಿ ಕಾರ್ಯಕ್ರಮಕ್ಕೆ ಹೆಚ್‍ಡಿಕೆ ಹೋಗಿ ಬರೋದ್ರೊಳಗೆ ಆಪರೇಷನ್ ಮುಗಿದು ಹೋಗಿತ್ತು: ಡಿಕೆಶಿ
Advertisement
Advertisement
ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮ ಹಾಗೂ ಜಾಥಾಗಳನ್ನು ಹಮ್ಮಿಕೊಳ್ಳುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಇದಕ್ಕೆ ಮತದಾರರು ಸಹಕರಿಸಬೇಕು ಎಂದು ಕೇಳಿಕೊಂಡರು.
ಸೈಕ್ಲಥಾನ್ ಸಾಗಿದ ಹಾದಿ
ವಿಧಾನ ಸೌಧದ ಗ್ರಾಂಡ್ ಸ್ಟೆಪ್ಸ್ ಮುಂಭಾಗದಿಂದ, ಕೆ.ಆರ್ ವೃತ್ತದ ನೃಪತುಂಗ ರಸ್ತೆಯ ಮೂಲಕ ಸಾಗಿ, ಹಡ್ಸ್‍ನ್ ವೃತ್ತ, ಕಸ್ತೂರ್ ಬಾ ರಸ್ತೆ, ಕ್ವೀನ್ಸ್ ರಸ್ತೆ (ಚಿನ್ನಸ್ವಾಮಿ ಕ್ರೀಡಾಂಗಣ)ದಿಂದ, ಡಾ. ಬಿ.ಆರ್ ಅಂಬೇಡ್ಕರ್ ರಸ್ತೆಯ ಮೂಲಕ ವಿಧಾನಸೌಧ ಪೂರ್ವ ದ್ವಾರದ ಬಳಿ ಸೈಕ್ಲೋಥಾನ್ ಮುಕ್ತಾಯಗೊಂಡಿತು.
ಈ ವೇಳೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಕಾಂತರಾಜು, ಸ್ವೀಪ್ ನೋಡಲ್ ಅಧಿಕಾರಿಯಾದ ಪ್ರತಿಭಾ, ಚುನಾವಣಾ ರಾಯಭಾರಿಗಳಾದ ಅನುಪ್ ಶ್ರೀಧರ್, ನೀತು ವನಜಾಕ್ಷಿ, ಸೈಕ್ಲಿಸ್ಟ್‍ಗಳಲ್ಲಿ ಎನ್‍ಎಸ್‍ಎಸ್ ವಿದ್ಯಾರ್ಥಿಗಳು, ನಾಗರೀಕರು ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು. ಇದನ್ನೂ ಓದಿ: ಎರಡು ಬಾರಿ ಸಂಸತ್‌ಗೆ ಹೋಗಲು ಯತ್ನಿಸಿ ವಿಫಲರಾದ ಸಿದ್ದರಾಮಯ್ಯ!