ಪಂಚ ‘ವಾರ್’ ರಾಜ್ಯಗಳ ಕದನಕ್ಕೆ ಮುಹೂರ್ತ ಫಿಕ್ಸ್

Public TV
1 Min Read
vote 759

-ಇತ್ತ ಕರ್ನಾಟಕದ ಉಪ ಚುನಾವಣೆಗೂ ಮುಹೂರ್ತ ಫಿಕ್ಸ್

ನವದೆಹಲಿ: ನಾಲ್ಕು ರಾಜ್ಯಗಳಿಗೆ ಚುನಾವಣೆ ಸೇರಿದಂತೆ ಕರ್ನಾಟಕದ 2 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಮುಖ್ಯ ಚುನಾವಣಾ ಆಯುಕ್ತ ಓಪಿ ರಾವತ್ ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡಿದ್ದಾರೆ.

ಕರ್ನಾಟಕದ ಜಮಖಂಡಿ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರಗಳಿಗೂ ಚುನಾವಣಾ ದಿನಾಂಕ ಪ್ರಕಟವಾಗಿದ್ದು, ಇದೇ ನವೆಂಬರ್ 3ರಂದು ಮತದಾನ ನಡೆಯಲಿದೆ. ಎರಡೂ ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ನವೆಂಬರ್ 6ಕ್ಕೆ ಪ್ರಕಟವಾಗಲಿದೆ. ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ರಾಮನಗರ ವಿಧಾನಸಭಾ ಕ್ಷೇತ್ರ, ಸಿದ್ದು ನ್ಯಾಮೆಗೌಡರ ನಿಧನದಿಂದ ತೆರವಾಗಿರುವ ಜಮಖಂಡಿ ಕ್ಷೇತ್ರಕ್ಕೆ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ.

ಶಿವಮೊಗ್ಗ, ಮಂಡ್ಯ ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆ ನವೆಂಬರ್ 3 ರಂದು ನಡೆದ್ರೆ, ಫಲಿತಾಂಶ ನವೆಂಬರ್ 11ಕ್ಕೆ ಹೊರ ಬೀಳಲಿದೆ.

ಉಪಕದನಕ್ಕೆ ಮುಹೂರ್ತ
* ನವೆಂಬರ್ 3ಕ್ಕೆ ಉಪಚುನಾವಣೆ
* ನವೆಂಬರ್ 6ಕ್ಕೆ ಫಲಿತಾಂಶ
* ನಾಮಪತ್ರ ಸಲ್ಲಿಕೆ ಆರಂಭ ಅಕ್ಟೋಬರ್ 09
* ನಾಮಪತ್ರ ಸಲ್ಲಿಕೆ ಕೊನೆ ದಿನ ಅಕ್ಟೋಬರ್ 16
* ನಾಮಪತ್ರ ಪರಿಶೀಲನೆ ಅಕ್ಟೋಬರ್ 17
* ನಾಮಪತ್ರ ವಾಪಸ್‍ಗೆ ಕೊನೆ ದಿನ ಅಕ್ಟೋಬರ್ 20

ಉಪಚುನಾವಣೆ ಕ್ಷೇತ್ರಗಳು
* ವಿಧಾನಸಭೆ – ರಾಮನಗರ, ಜಮಖಂಡಿ
* ಲೋಕಸಭೆ – ಶಿವಮೊಗ್ಗ, ಬಳ್ಳಾರಿ, ಮಂಡ್ಯ

ರಾಜಸ್ಥಾನ, ಮಧ್ಯ ಪ್ರದೇಶ, ಛತ್ತೀಸಗಡ ಮತ್ತು ಮಿಜೋರಾಂ ರಾಜ್ಯಗಳಿಗೆ ಚುನಾವಣಾ ದಿನಾಂಕವನ್ನು ಪ್ರಕಟಿಸಲಾಗಿದ್ದು, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ನವೆಂಬರ್ 12ಕ್ಕೆ ಛತ್ತೀಸಗಡನಲ್ಲಿ ಮೊದಲ ಹಂತದಲ್ಲಿ ಮತದಾನ ನಡೆದ್ರೆ, ನವೆಂಬರ್ 20ಕ್ಕೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮಧ್ಯ ಪ್ರದೇಶ ಮತ್ತು ಮಿಜೋರಾಂ ಚುನಾವಣೆಗಳು ನವೆಂಬರ್ 28ಕ್ಕೆ ಚುನಾವಣೆ ನಡೆಯಲಿದೆ. ರಾಜಸ್ಥಾನ ಮತ್ತು ತೆಲಂಗಾಣ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 11ಕ್ಕೆ ಪಂಚ ರಾಜ್ಯಗಳ ಫಲಿತಾಂಶ ನಡೆಯಲಿದೆ.

Share This Article
Leave a Comment

Leave a Reply

Your email address will not be published. Required fields are marked *