ಮಂಡ್ಯ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Election) ಹಳೆ ಮೈಸೂರು (Old Mysuru) ಭಾಗದಲ್ಲಿ ಹೆಚ್ಚು ಸೀಟ್‌ಗಳನ್ನು ಗೆಲ್ಲಬೇಕೆಂದು ಬಿಜೆಪಿ (BJP) ಸದ್ಯ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಆದರೆ ಇದೀಗ ಬಿಜೆಪಿ ಕಳೆದ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‌ನೊಂದಿಗೆ ಹೊಂದಾಣಿಕೆ ರಾಜಕೀಯ ಮಾಡಿಕೊಂಡಿತ್ತು ಎಂದು ಬಿಜೆಪಿ ನಾಯಕರೊಬ್ಬರೇ ಆರೋಪಿಸಿದ್ದಾರೆ.
ಜೆಡಿಎಸ್ (JDS) ಹಾಗೂ ಕಾಂಗ್ರೆಸ್‌ನ (Congress) ಭದ್ರಕೋಟೆ ಎಂದು ಹಳೆ ಮೈಸೂರು ಭಾಗ ಅಂದರೆ ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತದೆ. ಇಲ್ಲಿ ಬಿಜೆಪಿ ತನ್ನ ಅಸ್ತಿತ್ವವನ್ನು ಸೃಷ್ಟಿ ಮಾಡಿಕೊಳ್ಳಲು ಹೆಣಗಾಡುತ್ತಿದೆ. ಕೇಂದ್ರ ಬಿಜೆಪಿ ನಾಯಕರು ಮುಂಬರುವ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸೀಟ್‌ಗಳನ್ನು ಗೆಲ್ಲಬೇಕೆಂದು ಸೀರಿಯಸ್ ಆಗಿ ತೆಗೆದುಕೊಂಡು ರಾಜ್ಯ ನಾಯಕರಿಗೆ ಖಡಕ್ ವಾರ್ನಿಂಗ್ ಕೊಟ್ಟಿದೆ.
Advertisement
Advertisement
ಹೀಗಾಗಿ ರಾಜ್ಯ ಬಿಜೆಪಿ ನಾಯಕರು ಹಳೆ ಮೈಸೂರು ಭಾಗಕ್ಕೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಿದ್ದಾರೆ. ಅದರಲ್ಲೂ ಮಂಡ್ಯ ಜಿಲ್ಲೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಬಿಜೆಪಿ ನಾಯಕರು, ಸಚಿವರು ಪ್ರತಿ ದಿನ ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳ ಪೈಕಿ ಒಂದೆಲ್ಲ ಒಂದು ಕ್ಷೇತ್ರಕ್ಕೆ ಯಾವುದಾದರೂ ಕಾರ್ಯಕ್ರಮ ಹೆಸರಿನಲ್ಲಿ ಭೇಟಿ ನೀಡಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಅಲ್ಲಿಗೆ ಈ ಬಾರಿಯ ಚುನಾವಣೆಯಲ್ಲಿ ಮಂಡ್ಯದ 7 ಕ್ಷೇತ್ರಗಳ ಪೈಕಿ ಕನಿಷ್ಠ ಮೂರರಿಂದ ನಾಲ್ಕು ಕ್ಷೇತ್ರಗಳಲ್ಲಾದ್ರು ಗೆಲ್ಲಬೇಕು ಎಂದು ಬಿಜೆಪಿ ನಿರ್ಧಾರ ಮಾಡಿಕೊಂಡಿದೆ.
Advertisement
ಈ ಬಾರಿ ಮಂಡ್ಯ ಜಿಲ್ಲೆ ಸೇರಿದಂತೆ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಆದರೆ ಇದೇ ಬಿಜೆಪಿಯ ಅಬ್ಬರ ಕಳೆದ ಬಾರಿ ಈ ಭಾಗದಲ್ಲಿ ಇರಲಿಲ್ಲ. ಕೇವಲ ಹೆಸರಿಗಷ್ಟೇ ಅಭ್ಯರ್ಥಿಗಳನ್ನು ಹಾಕಿ ಅವರ ಗೆಲುವಿಗೆ ಶ್ರಮಿಸಲಿಲ್ಲ. ಇದಕ್ಕೆ ಕಾರಣ ಎಂದರೆ ಅದು ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದರು. ಇದೀಗ ಇದಕ್ಕೆ ಪುಷ್ಟಿ ನೀಡುವಂತೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಬಾರಿ ಸದ್ದು ಮಾಡುತ್ತಿದೆ.
Advertisement
ಮಂಡ್ಯದಲ್ಲಿ ಹಾಗೂ ಹಳೆ ಮೈಸೂರು ಭಾಗದಲ್ಲಿ ನಮ್ಮ ನಾಯಕರು ಯಾಕೋ ಏನೋ ಕಳೆದ ಬಾರಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದರು. ಹೀಗಾಗಿ ಹೆಸರಿಗಷ್ಟೇ ಈ ಭಾಗದಲ್ಲಿ ಅಭ್ಯರ್ಥಿಗಳನ್ನು ಹಾಕಲಾಗಿತ್ತು. ಚುನಾವಣೆಯ ಪೂರ್ವದಲ್ಲಿ ನಮ್ಮವರು ಒಪ್ಪಂದ ಮಾಡಿಕೊಂಡಿದ್ದರು, ಆದರೆ ಚುನಾವಣೆ ನಂತರ ಜೆಡಿಎಸ್‌ನವರು ನಮ್ಮಗೆ ಕೈ ಕೊಟ್ರು. ಆದರೆ ಈ ಬಾರಿ ಹಾಗೆ ಆಗುವುದಿಲ್ಲ, ಅಮಿತ್ ಶಾ ಅವರೇ ಸೂಚನೆ ಕೊಟ್ಟಿದ್ದಾರೆ, ಮಂಡ್ಯ ಹಾಗೂ ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸೀಟ್‌ಗಳನ್ನು ಗೆಲ್ಲಬೇಕು ಎಂದಿದ್ದಾರೆ. ಹೀಗಾಗಿ ಈ ಬಾರಿ ಮಂಡ್ಯ ಹಳೆ ಮೈಸೂರಿನಲ್ಲಿ ನಾವು ಸೀರಿಯಸ್ ಆಗಿ ಚುನಾವಣೆ ಮಾಡಿ ಅತಿ ಹೆಚ್ಚು ಸೀಟ್‌ಗಳನ್ನು ಗೆಲ್ಲುತ್ತೇವೆ ಎಂದು ಯೋಗೇಶ್ವರ್ (CP Yogeshwar) ಹೇಳಿದ್ದಾರೆ. ಇದನ್ನೂ ಓದಿ: ರಾಯಚೂರಿನ ರಿಮ್ಸ್‌ನಲ್ಲಿ ಹಂದಿಗಳ ಕಾಟ- ಬಾಣಂತಿಯರು, ಶಿಶುಗಳ ವಾರ್ಡ್‍ನಲ್ಲಿ ಆತಂಕ
ಒಟ್ಟಾರೆ ಇಷ್ಟು ದಿನ ಬಿಜೆಪಿ ಹಾಗೂ ಜೆಡಿಎಸ್ ಎ, ಬಿ ಟೀಮ್ ಎಂಬ ಕಾಂಗ್ರೆಸ್ ಆರೋಪ ಬಿಜೆಪಿ ನಾಯಕನಿಂದಲೇ ನಿಜ ಎಂದು ಗೊತ್ತಾಗಿದೆ. ಆದರೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಹಳೆ ಮೈಸೂರು ಭಾಗದಲ್ಲಿ ಚುನಾವಣೆ ಎದುರಿಸಿ ಎಷ್ಟು ಸೀಟ್ ಗೆಲ್ಲುತ್ತೆ ಎನ್ನುವುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: 170 ಶಾಲಾ ಮಕ್ಕಳಿಗೂ ಒಂದೇ ಶೌಚಾಲಯ- ಮರದ ಕೆಳಗೆಯೇ ನಿತ್ಯ ಪಾಠ