ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೃತ್ತಿ ಶಿಕ್ಷಣ ಕೋರ್ಸ್‍ಗಳಿಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆಗಳ ವೇಳಾಪಟ್ಟಿ ಪ್ರಕಟಗೊಂಡಿದ್ದು, ವಿಧಾನ ಸೌಧ ಚುನಾವಣೆ ಹಿನ್ನಲೆಯಲ್ಲಿ ಈ ಬಾರಿ ಏಪ್ರಿಲ್ ನಲ್ಲಿ ಪರೀಕ್ಷೆ ನಡೆಸಲು ಪ್ರಾಧಿಕಾರ ನಿರ್ಧಾರಿಸಿದೆ.
ಕಳೆದ ವರ್ಷಕ್ಕಿಂತ 15 ದಿನ ಮುಂಚಿತವಾಗಿ ಏಪ್ರಿಲ್ 18 ರಿಂದ 20 ರವರೆಗೆ ಸಿಇಟಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಮುಂಚಿತವಾಗಿ ಪರೀಕ್ಷೆಗೆ ಸಿದ್ಧತೆ ನಡೆಸಿಕೊಳ್ಳುವ ಅಗತ್ಯವಿದೆ.
Advertisement
Advertisement
ಯಾವ ದಿನ ಯಾವ ಪರೀಕ್ಷೆ?
1. ಏಪ್ರಿಲ್ 18 – ಜೀವಶಾಸ್ತ್ರ, ಗಣಿತ
2. ಏಪ್ರಿಲ್ 19 – ಭೌತಶಾಸ್ತ್ರ ಹಾಗೂ ರಸಾಯನಶಾಸ್ತ್ರ
3. ಏಪ್ರಿಲ್ 20 – ಹೊರನಾಡು – ಗಡಿನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ
Advertisement
Advertisement
ಇನ್ನೂ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‍ಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಹಾಗೂ ಆರ್ಕಿಟೆಕ್ಚರ್ ಕೋರ್ಸ್‍ನ ಪ್ರವೇಶಕ್ಕಾಗಿ ಜೆಇಇ-2 ಅಥವಾ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನಡೆಸುವ ಎನ್‍ಎಟಿಎ ಪರೀಕ್ಷೆಗೆ ಹಾಜರಾಗಬೇಕಾಗಿದೆ. ಈ ಕುರಿತು ಪರೀಕ್ಷಾ ಪ್ರಾಧಿಕಾರ ಮುಂಚಿತವಾಗಿ ದಿನಾಂಕ ನಿಗದಿ ಮಾಡಿ ಪ್ರಕಟನೆ ನೀಡಿದೆ.
ಎಂಜಿನಿಯರಿಂಗ್, ತಂತ್ರಜ್ಞಾನ ಮತ್ತು ಕೃಷಿ ವಿಜ್ಞಾನ ಸೇರಿದಂತೆ ವಿವಿಧ ಕೋರ್ಸ್‍ಗಳನ್ನು ಆಯ್ಕೆ ಮಾಡುವ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ.