ಬೆಂಗಳೂರು: ವಿಧಾನ ಪರಿಷತ್ ನ ಶಿಕ್ಷಕರು ಮತ್ತು ಪದವೀಧರ 6 ಕ್ಷೇತ್ರಗಳಿಗೆ ಸೋಮವಾರ ಚುನಾವಣೆ ನಡೆಯಲಿದೆ. ಚುನಾವಣೆಗೆ ಆಯೋಗ ಸಕಲ ಸಿದ್ದತೆ ಮಾಡಿಕೊಂಡಿದೆ.
ಲೋಕಸಭಾ ಚುನಾವಣೆಯಂತೆ ವಿಧಾನ ಪರಿಷತ್ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಆಡಳಿತ ಪಕ್ಷ ಕಾಂಗ್ರೆಸ್ ಅನ್ನ ಎದುರಿಸುತ್ತಿದೆ. 6 ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಪರ್ಧೆ ಮಾಡ್ತಿದ್ದು, ಬಿಜೆಪಿ 4 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿ ಆಡಳಿತ ಪಕ್ಷಕ್ಕೆ ಸವಾಲ್ ಹಾಕಿದೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೂ ಮತದಾನ ನಡೆಯಲಿದೆ. ಮತದಾನ ಮಾಡುವವರು ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್, ಪಾಸ್ ಪೋರ್ಟ್ ಸೇರಿ ಸರ್ಕಾರದ ಅಧಿಕೃತ ಗುರುತಿನ ಚೀಟಿ ತೋರಿಸಿ ಮತದಾನ ಮಾಡಬಹುದಾಗಿದೆ.
Advertisement
Advertisement
ವಿಧಾನ ಪರಿಷತ್ ಚುನಾವಣೆ ವಿವರ ಹೀಗಿದೆ:
ಪದವೀಧರ ಕ್ಷೇತ್ರದಲ್ಲಿ ಒಟ್ಟು 3,63,573 ಮತಗಳಿವೆ. 461 ಒಟ್ಟು ಮತ ಕೇಂದ್ರಗಳಿವೆ. ಇನ್ನು ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 70260 ಮತಗಳಿದ್ದು, 170 ಮತ ಕೇಂದ್ರಗಳಿವೆ. ಒಟ್ಟಾರೆ 78 ಅಭ್ಯರ್ಥಿಗಳಿದ್ದಾರೆ.
Advertisement
* ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿದ್ದಾರೆ. ಇನ್ನು 1,56,623 ಮತದಾರರಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಡಾ. ಚಂದ್ರಶೇಖರ ಪಾಟೀಲ್ ಹಾಗೂ ಬಿಜೆಪಿಯಿಂದ ಅಮರನಾಥ ಪಾಟೀಲ್ ಕಣದಲ್ಲಿದ್ದಾರೆ.
* ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಒಟ್ಟು 10 ಮಂದಿ ಅಭ್ಯರ್ಥಿಗಳಿದ್ದಾರೆ. 85090 ಒಟ್ಟು ಮತದಾರರಿರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಆಯನೂರು ಮಂಜುನಾಥ್ ಹಾಗೂ ಬಿಜೆಪಿಯಿಂದ ಧನಂಜಯ ಸರ್ಜಿ ಸ್ಪರ್ಧಿಸುತ್ತಿದ್ದಾರೆ.
* ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 15 ಮಂದಿ ಅಭ್ಯರ್ಥಿಗಳಿದ್ದಾರೆ. 1,21,860 ಒಟ್ಟು ಮತದಾರರಿದ್ದು, ಕಾಂಗ್ರೆಸ್ ನಿಂದ ರಾಮೋಜಿ ಗೌಡ ಹಾಗೂ ಬಿಜೆಪಿಯಿಂದ ಅ. ದೇವೇಗೌಡ ಚುಣವಣಾ ಅಖಾಡದಲ್ಲಿದ್ದಾರೆ.
Advertisement
* ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 15 ಮಂದಿ ಅಭ್ಯರ್ಥಿಗಳಿದ್ದಾರೆ. 25,309 ಒಟ್ಟು ಮತದಾರರು ಇರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಡಿ.ಟಿ. ಶ್ರೀನಿವಾಸ್ ಹಾಗೂ ಬಿಜೆಪಿಯಿಂದ ವೈ.ಎ. ನಾರಾಯಣಸ್ವಾಮಿ ಕಣದಲ್ಲಿದ್ದಾರೆ.
* ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ 8 ಮಂದಿ ಅಭ್ಯರ್ಥಿಗಳಿದ್ದು, 23,402 ಮಂದಿ ಮತದಾರರಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಕೆ.ಕೆ. ಮಂಜುನಾಥ್ ಸ್ಪರ್ಧಿಸಿದರೆ, ಜೆಡಿಎಸ್‍ನಿಂದ ಭೋಜೇಗೌಡ ಸ್ಪರ್ಧಿಸುತ್ತಿದ್ದಾರೆ.
* ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 11 ಮಂದಿ ಅಭ್ಯರ್ಥಿಗಳಿದ್ದಾರೆ. 21549 ಮಂದಿ ಒಟ್ಟು ಮತದಾರರಿದ್ದಾರೆ. ಕಾಂಗ್ರೆಸ್‍ನಿಂದ ಮರಿತಿಬ್ಬೇಗೌಡ ಹಾಗೂ ಜೆಡಿಎಸ್‍ನಿಂದ ವಿವೇಕಾನಂದ ಚುನಾವಣಾ ಕಣದಲ್ಲಿದ್ದಾರೆ.