ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆ: ವಿಜಯೇಂದ್ರ

Public TV
1 Min Read
BY VIJAYENDRA

ಬೆಂಗಳೂರು: ಮುಂದಿನ ಶುಕ್ರವಾರ ಶಾಸಕಾಂಗ ಸಭೆ ನಡೆಯಲಿದ್ದು, ಈ ವೇಳೆ ವಿಪಕ್ಷ ನಾಯಕನ ಆಯ್ಕೆ ನಡೆಯಲಿದೆ ಎಂದು ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರ ಅಭಿಪ್ರಾಯ ಪಡೆದು ವಿಪಕ್ಷ ನಾಯಕನ ಆಯ್ಕೆ ಮಾಡಲಾಗುವುದು. ಯಡಿಯೂರಪ್ಪ (BS Yediyurappa) ಅವರು ನಡ್ಡಾ ಜೊತೆ ಚರ್ಚೆ ಮಾಡಿದ್ದಾರೆ ಎಂದರು.

ಯಡಿಯೂರಪ್ಪನ ಮಗ ಎನ್ನುವ ಕಾರಣಕ್ಕೆ ನನಗೆ ಈ ಪೋಸ್ಟ್ ಕೊಟ್ಟಿಲ್ಲ. ಯಡಿಯೂರಪ್ಪ ಮಗ ಎನ್ನುವ ಹೆಮ್ಮೆ ಇದೆ. ಪಕ್ಷ ಬೀಡುವ ಯೋಚನೆಯಲ್ಲಿ ಇರೋರನ್ನು ಒಟ್ಟಿಗೆ ತಗೊಂಡು ಹೋಗುತ್ತೇನೆ. ದೆಹಲಿಯಿಂದ ವೀಕ್ಷಕರು ಬರಲಿದ್ದಾರೆ. ಸೋಮಣ್ಣ ಅಶೋಕ್ ಯತ್ನಾಳ್ ಬೊಮ್ಮಾಯಿ ಎಲ್ಲಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದರು.

ಇದಕ್ಕೂ ಮುನ್ನ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ, ಗೃಹ ಸಚಿವ ಅಮಿತ್ ಶಾ ಅವರಿಗೆ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿಎಲ್ ಸಂತೋಷ್ ಅವರುಗಳಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಅರ್ಪಿಸಿದ್ದಾರೆ.

ಸಂಘದ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸರ್ವರ ನಿರೀಕ್ಷೆ ಹಾಗೂ ಜನರ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ. ನಾಡಿನ ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದು ವಿಜಯೇಂದ್ರ ಹೇಳಿದ್ದಾರೆ.

Share This Article