ಭುವನೇಶ್ವರ: ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಲು ಯತ್ನಿಸಿದ ಚುನಾವಣಾ ಅಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಒಡಿಶಾದ ಸಂಬಲ್ಪುರದ ಚುನಾವಣಾ ವೀಕ್ಷಕರಾಗಿ ನೇಮಕಗೊಂಡಿದ್ದ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹಿನ್ಸ್ ಅವರನ್ನು ನಿಯಮ ಉಲ್ಲಂಘಿಸಿದ್ದಕ್ಕೆ ಅಮಾನತುಗೊಳಿಸಲಾಗಿದೆ. ಮುಂದಿನ ಸೂಚನೆಯವರೆಗೂ ಜಿಲ್ಲಾ ಕೇಂದ್ರದಲ್ಲಿರುವಂತೆ ಭಾರತೀಯ ಚುನಾವಣಾ ಆಯೋಗ ಕಾರ್ಯದರ್ಶಿ ರಾಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.
Advertisement
ಮಂಗಳವಾರ ಎರಡನೇ ಹಂತದ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ರ‍್ಯಾಲಿಯಲ್ಲಿ ಭಾಗವಹಿಸಲು ಮೋದಿ ಸಂಬಲ್ಪುರಕ್ಕೆ ಬಂದಿದ್ದರು. ಈ ವೇಳೆ ಮೋದಿ ಅವರ ಹೆಲಿಕಾಪ್ಟರ್ ಅನ್ನು ಮೊಹ್ಸಿನ್ ಪರಿಶೀಲನೆ ನಡೆಸಲು ಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಒಟ್ಟು 15 ನಿಮಿಷ ಮೋದಿ ಅವರ ಹೆಲಿಕಾಪ್ಟರ್ ಅನ್ನು ಅಧಿಕಾರಿ ತಪಾಸಣೆ ಮಾಡಿದ್ದಾರೆ ಎಂದು ವರದಿಯಾಗಿದೆ.
Advertisement
At the grand rally in Bhubaneswar, talked about BJP’s vision for Odisha in agriculture, water resources and infrastructure.
BJD is patronising chit fund scamsters, commission seekers, bullies and poor administrators. Such a party has no right to govern Odisha pic.twitter.com/8aVOVVP032
— Narendra Modi (@narendramodi) April 16, 2019
Advertisement
ಅಮಾನತು ಯಾಕೆ?
ಚುನಾವಣಾ ಆಯೋಗದ ಮಾರ್ಗದರ್ಶಿ ಸೂತ್ರದ ಪ್ರಕಾರ ಪ್ರಕಾರ ಚುನಾವಣಾ ಸಮಯದಲ್ಲಿ ಎಸ್‍ಪಿಜಿ ಭದ್ರತೆ ಇರುವ ವ್ಯಕ್ತಿಗಳಿಗೆ ತಪಾಸಣೆಯಿಂದ ವಿನಾಯಿತಿಯನ್ನು ನೀಡಲಾಗಿದೆ. ಆದರೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿದ್ದ ಮೊಹ್ಸಿನ್ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಡಿಐಜಿ ಅವರ ವರದಿಯ ಆಧಾರದಲ್ಲಿ ಮಾರ್ಗದರ್ಶಿ ಸೂತ್ರಗಳನ್ನು ಉಲ್ಲಂಘಿಸಿದ್ದಕ್ಕೆ ಚುನಾವಣಾ ಆಯೋಗ ಮೊಹಿನ್ಸ್ ಅವರನ್ನು ಅಮಾನತುಗೊಳಿಸಿದೆ.