ಜೈಪುರ: ನಾಲ್ಕು ರಾಜ್ಯಗಳ ಚುನಾವಣಾ ಮತ ಎಣಿಕೆ (Election Counting) ನಡೆಯುತ್ತಿದ್ದು ರಾಜಸ್ಥಾನದಲ್ಲಿ (Rajasthan) ಬಿಜೆಪಿ (BJP) ಮುನ್ನಡೆ ಸಾಧಿಸಿದೆ.
ಬೆಳಗ್ಗೆ 8:30ರ ವೇಳೆಗೆ ಬಿಜೆಪಿ 60, ಕಾಂಗ್ರೆಸ್ 50, ಇತರರು 10 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಈ ಬಾರಿ ಬಿಜೆಪಿ ರಾಜಸ್ಥಾನದಲ್ಲಿ ಅಧಿಕಾರಕ್ಕೆ ಏರಲಿದೆ ಎಂದು ಭವಿಷ್ಯ ನುಡಿದಿವೆ. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ: ನರೋತ್ತಮ ಮಿಶ್ರಾ
ರಾಜಸ್ಥಾನದ 199 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಬಹುಮತಕ್ಕೆ 100 ಸ್ಥಾನಗಳ ಅಗತ್ಯವಿದೆ. 2018ರ ಚುನಾವಣೆಯಲ್ಲಿ ಕಾಂಗ್ರೆಸ್ 100, ಬಿಜೆಪಿ 73, ಬಿಎಸ್‌ಪಿ 6, ಆರ್‌ಎಲ್‌ಪಿ 3, ಪಕ್ಷೇತರ ಅಭ್ಯರ್ಥಿಗಳ ಪೈಕಿ 13 ಮಂದಿ ಜಯಗಳಿಸಿದ್ದರು.
ಕಾಂಗ್ರೆಸ್ ಅಧಿಕಾರ ಹಿಡಿದ ಬಳಿಕ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಪಿಸಿಸಿ ಆಧ್ಯಕ್ಷರಾಗಿದ್ದ ಸಚಿನ್ ಪೈಲಟ್ ಹಾಗೂ ಸಿಎಂ ಗೆಹ್ಲೋಟ್ ನಡುವೆ ಅಧಿಕಾರಕ್ಕಾಗಿ ಶೀತಲ ಸಮರ ನಡೆಯುತ್ತಲೇ ಇತ್ತು. ಸರ್ಕಾರದ ವಿರುದ್ಧವೇ ಸಚಿನ್ ಪೈಲಟ್ ಧರಣಿ ನಡೆಸಿದ್ದರು. ಈ ಕಿತ್ತಾಟದ ಪರಿಣಾಮ ಬಿಜೆಪಿ ಈ ಬಾರಿ ಅಧಿಕಾರಕ್ಕೆ ಹಿಡಿಯಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ.