LatestMain PostNational

ಕಾಂಗ್ರೆಸ್ ಪಕ್ಷವನ್ನು ಸೇರಲು ನಿರಾಕರಿಸಿದ ಪ್ರಶಾಂತ್ ಕಿಶೋರ್

ನವದೆಹಲಿ: ಸರಣಿ ಸಭೆಗಳ ನಂತರವು ಚುನಾವಣಾ ಚಾಣಾಕ್ಷ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷವನ್ನು ಸೇರುವ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ.

ಕೆಲವು ದಿನಗಳಿಂದ ಕುತೂಹಲ ಮೂಡಿಸಿದ್ದ ಪ್ರಶಾಂತ್ ಕಿಶೋರ್ ಮತ್ತು ಕಾಂಗ್ರೆಸ್ ನಡುವಿನ ಮಾತುಕತೆ ಈಗ ಅಂತ್ಯಕಂಡಿದೆ. 2024ರ ರಾಷ್ಟ್ರೀಯ ಚುನಾವಣೆಗೆ ಮುಂಚಿತವಾಗಿ ರಾಜಕೀಯ ಸವಾಲುಗಳನ್ನು ಎದುರಿಸಿ ಮುನ್ನಡೆ ಸಾಧಿಸಲು ಯೋಚಿಸಿದ್ದ ಕಾಂಗ್ರೆಸ್‍ಗೆ ಇದೀಗ ಹಿನ್ನಡೆಯಾಗಿದೆ. ಈ ಬಗ್ಗೆ ಪ್ರಶಾಂತ್ ಕಿಶೋರ್ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ರಣದೀಪ್ ಸುರ್ಜೇವಾಲಾ ಸ್ಪಷ್ಟಪಡಿಸಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?
ಚುನಾವಣಾ ತಂತ್ರಗಾರಿಕೆಯ ಭಾಗವಾಗಿ ಪಕ್ಷಕ್ಕೆ ಸೇರಲು ಮತ್ತು ಚುನಾವಣೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಕಾಂಗ್ರೆಸ್‍ನ ಪ್ರಸ್ತಾಪವನ್ನು ನಾನು ನಿರಾಕರಿಸಿದೆ. ನನ್ನ ಅಭಿಪ್ರಾಯದ ಪ್ರಕಾರ ರಚನಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಕಾಂಗ್ರೆಸ್ ಪಕ್ಷಕ್ಕೆ ಮುಖ್ಯವಾಗಿ ಬೇಕಾಗಿರುವುದು ಸರಿಯಾದ ನಾಯಕತ್ವವಾಗಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಸೇರಿದಂತೆ ಮತ್ತಿತರ ಕಾಂಗ್ರೆಸ್ ನಾಯಕರ ಜೊತೆಗೆ ಪ್ರಶಾಂತ್ ಕಿಶೋರ್ ಮಾತುಕತೆ ನಡೆಸಿದ್ದರು. ಹಲವು ಸುತ್ತಿನ ಮಾತುಕತೆಗಳ ನಂತರ ಪ್ರಶಾಂತ್ ಕಿಶೋರ್ ಕಾಂಗ್ರೆಸ್‍ಗೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿಹರಿದಾಡುತ್ತಿತ್ತು. ಆದರೆ ಇಂದು ಪ್ರಶಾಂತ್ ಕಿಶೋರ್ ಟ್ವೀಟ್ ಮಾಡಿ ಕಾಂಗ್ರೆಸ್‍ಗೆ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಟ್ವಿಟ್ಟರ್ ಬಗೆಗಿನ ನಂಬಿಕೆ ಬದಲಾಗಿಲ್ಲ: ಮಸ್ಕ್‌ಗೆ ಕೇಂದ್ರ ಪ್ರತಿಕ್ರಿಯೆ

ಕಾಂಗ್ರೆಸ್ ಜೊತೆ ಮಾತುಕತೆ ನಡೆಯುತ್ತಿರುವಾಗಲೇ ತೆಲಂಗಾಣದ ಮುಖ್ಯಮಂತ್ರಿ ಕೆಸಿಆರ್ ಜೊತೆಗೂ ಮಾತುಕತೆ ನಡೆಸಿದ್ದರು. ಪ್ರಶಾಂತ್ ಕಿಶೋರ್ ಮುಂದಿನ ನಡೆಯೇನು ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ಇದನ್ನೂ ಓದಿ: ಚೀನಾದಿಂದ ಟೆಸ್ಲಾ ಕಾರುಗಳನ್ನ ಆಮದು ಮಾಡಿಕೊಂಡು ಭಾರತದಲ್ಲಿ ಮಾರುವ ಹಾಗಿಲ್ಲ: ಗಡ್ಕರಿ

Leave a Reply

Your email address will not be published.

Back to top button