ಮುದ್ದೇಬಿಹಾಳ: ಸಿದ್ದರಾಮಯ್ಯ (Siddaramaiah) ಅವರು ಜೆಡಿಎಸ್ (JDS) ಪಕ್ಷದ ಬಗ್ಗೆ ನಾಲಿಗೆ ಹರಿಬಿಡುತ್ತಿದ್ದಾರೆ. ಸುಮ್ಮನಿರದಿದ್ದರೇ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಲು ಧರ್ಮಸ್ಥಳದ ಸಿದ್ಧವನದಲ್ಲಿ ನಡೆಸಿದ ಷಡ್ಯಂತ್ರ ಬಿಚ್ಚಿಡಬೇಕಾಗುತ್ತದೆ ಎಂದು ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಎಚ್ಚರಿಸಿದ್ದಾರೆ.
ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಬಳವಾಟ ಗ್ರಾಮದಲ್ಲಿ ಪಂಚರತ್ನ ರಥಯಾತ್ರೆ (Pancharatna Yatra) ಭಾಗವಾಗಿ ಗ್ರಾಮ ವಾಸ್ತವ್ಯ ಹೂಡಿದ್ದ ಹೆಚ್‌ಡಿಕೆ ಅವರಿಂದು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಇದನ್ನೂ ಓದಿ: ಹಿಟ್ಲರ್ ಸ್ವಲ್ಪ ದಿನ ಮೆರೆದ ಮೇಲೆ ಏನಾಯ್ತು? ಮೋದಿ 100 ಬಾರಿ ಬಂದರೂ ಬಿಜೆಪಿ ಬರಲ್ಲ: ಸಿದ್ದರಾಮಯ್ಯ
Advertisement
Advertisement
ನಮ್ಮ ಬಳಿ ನಿರಂತರವಾಗಿ ಕಷ್ಟ ಹೇಳಿಕೊಂಡು ಜನ ಬರುತ್ತಾರೆ. ಸುಮ್ಮನೆ ಜೆಡಿಎಸ್ (JDS) ಪಕ್ಷದ ಬಗ್ಗೆ ಏನೇನೊ ಮಾತನಾಡಬೇಡಿ. ಮುಖ್ಯಮಂತ್ರಿ ಆಸೆಗಾಗಿ ಪಕ್ಷ ಬಿಟ್ಟು ಹೋಗಿದ್ದು ನೆನಪಿದೆಯಾ ನಿಮಗೆ? ನಿಮ್ಮಿಂದ ನಾನು ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ. ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರು ಕಟ್ಟಿದ ಪಕ್ಷವನ್ನು ಉಳಿಸಿಕೊಂಡು ಹೊರಟಿದ್ದೇವೆ. ಅಂಥ ಪಕ್ಷವನ್ನು, ಅವರ ಸಿದ್ಧಾಂತವನ್ನು ಗಾಳಿಗೆ ತೂರಿ ಸಿಎಂ ಕುರ್ಚಿ ಹಿಂದೆ ಓಡಿ ಹೋದವರು ಯಾರು? ನಿಮ್ಮ ಯೋಗ್ಯತೆ ಏನು ಅಂತಾ ಗೊತ್ತಿದೆ ಎಂದು ಹೆಚ್‌ಡಿಕೆ ಎಂದು ಸಿದ್ದರಾಮಯ್ಯ ವಿರುದ್ಧ ಕೆಂಡಾಮಂಡಲವಾಗಿದ್ದಾರೆ.
Advertisement
Advertisement
ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಲು ನೀವ್ ಏನು ಮಾಡಿದಿರಿ? ಯಾರ ಜೊತೆ ಕೂಡಿ ಕುತಂತ್ರ ಮಾಡಿದಿರಿ ಅನ್ನೋದು ತಿಳಿದಿದೆ. ಬಿಜೆಪಿಗೆ (JDS) ಅಧಿಕಾರ ಹೋಗಬಾರದು ಅಂತಾ ನಿಮ್ಮ ಪಕ್ಷದ ವರಿಷ್ಠರು ನಮ್ಮ ಬಾಗಿಲಿಗೆ ಬಂದಿದ್ದರು. ಖರ್ಗೆ, ಪರಮೇಶ್ವರ್, ಡಿ.ಕೆ ಶಿವಕುಮಾರ್ (DK Shivakumar) ಇದ್ದಾರೆ. ಅವರಿಗೆ ಇದೆಲ್ಲಾ ಗೊತ್ತಿಲ್ಲವೆ? ಆಗ ನೀವು ಎಲ್ಲಿದ್ದೀರಿ ಎಂದು ಪ್ರಶ್ನಿಸಿ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಪತ್ನಿಯ ಪ್ರಿಯಕರನನ್ನು ಕೊಂದು ದೇಹದ ಭಾಗಗಳನ್ನು ಕಸದ ರಾಶಿಯಲ್ಲಿ ಎಸೆದ
ನನ್ನ ಸರ್ಕಾರ ಹೇಗೆ ಹೋಯಿತು? ಅದನ್ನು ತೆಗೆಯಲು ನಿಮ್ಮ ಕಾಣಿಕೆ ಏನು? ಬಿಜೆಪಿಯವರ ಜತೆ ಹೇಗೆಲ್ಲಾ ಕುಮ್ಮಕ್ಕು ಕೊಟ್ಟಿದ್ದೀರಿ? ಯಾರನ್ನೆಲ್ಲ ಎಲ್ಲೆಲ್ಲಿಗೆ ಕಳಿಸಿದಿರಿ ಎಂಬ ಮಾಹಿತಿ ನನಗಿದೆ. ಆದರೆ ಜಾತ್ಯಾತೀತ ತತ್ವ ತನ್ನ ಆಸ್ತಿ ಎನ್ನುವ ರೀತಿ ವರ್ತಿಸುತ್ತಿದ್ದಿರಿ. ಜಯಪ್ರಕಾಶ್ ನಾರಾಯಣ್ ಅವರ ಸಿದ್ಧಾಂತಕ್ಕೆ ನೀವು ಬದ್ಧರಾಗಿ ಇದ್ದಿದ್ದರೆ ನೀವು ಅಧಿಕಾರಕ್ಕಾಗಿ ಮಾತೃಪಕ್ಷವನ್ನ ಕಾಲಿನಲ್ಲಿ ಒದ್ದು ಹೋಗುತ್ತಿರಲಿಲ್ಲ ಎಂದು ಗುಡುಗಿದ್ದಾರೆ.
ಬಿಜೆಪಿ ಪಕ್ಷದವರಿಗಿಂತ ಭ್ರಷ್ಟಾಚಾರದಲ್ಲಿ ನಿವೇನೂ ಕಮ್ಮಿ ಇಲ್ಲ. ನೀವು ಬೇಕಾದಷ್ಟು ಅಕ್ರಮ ನಡೆಸಿದ್ದೀರಿ. ನಾನು ಎತ್ತಿದ ಪ್ರಶ್ನೆಗಳಿಗೆ ಈವರೆಗೆ ಉತ್ತರ ಕೊಡಲು ನಿಮ್ಮಿಂದ ಆಗಿಲ್ಲ. ಮತ್ತೆ ನಮ್ಮ ಪಕ್ಷದ ಬಗ್ಗೆ ನಾಲಿಗೆ ಹರಿಯಬಿಡುತ್ತೀರಾ? ನಾಚಿಕೆ ಇಲ್ಲವೇ? ನಾನು ಸದಾ ಜನಗಳ ಮಧ್ಯೆ ಇರುವ ಸಾಮಾನ್ಯ ವ್ಯಕ್ತಿ. ಆದರೆ ನೀವು ಸಂಜೆ 6 ಗಂಟೆಯಾದ ಮೇಲೆ ಯಾರ ಕೈಗೆ ಸಿಗುತ್ತಿದ್ದೀರಿ? ಮಧ್ಯಾಹ್ನ ಊಟಕ್ಕೆಂದು ಹೋದರೆ ನಾಪತ್ತೆ ಆಗುತ್ತಿದ್ದ ಬಗ್ಗೆ ಕೂಡ ನೀವು ಭಾಷಣ ಮಾಡಬೇಕಲ್ಲವೇ ಎಂದು ಕುಟುಕಿದ್ದಾರೆ.
ಈ ಸಂದರ್ಭದಲ್ಲಿ ಮುದ್ದೇಬಿಹಾಳ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸಿ.ಎನ್. ಸೋಲಾಪೂರ, ಪಕ್ಷದ ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ ಉಪಸ್ಥಿತರಿದ್ದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k