ಬೆಂಗಳೂರು: ರಾಜ್ಯ ವಿಧಾನಮಂಡಲದ ಸ್ಪೀಕರ್ (Speaker) ಹಾಗೂ ಸಭಾಪತಿ (Chairman) ಸ್ಥಾನಗಳಿಗೆ ಚುನಾವಣೆ (Election) ದಿನಾಂಕ ನಿಗದಿಯಾಗಿದೆ. ಆಗಸ್ಟ್ 14ರಂದು ಎರಡೂ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ.
ಸಂಖ್ಯಾಬಲದ ದೃಷ್ಟಿಯಿಂದ ಆಡಳಿತಾರೂಢ ಪಕ್ಷಕ್ಕೆ ಅನುಕೂಲಕರ ಪರಿಸ್ಥಿತಿ ಇರುವುದರಿಂದ, ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ಗಳು ಎರಡೂ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಇದನ್ನೂ ಓದಿ: ‘ವಂದೇ ಮಾತರಂ’ಗೆ ಅಪಮಾನ ಮಾಡಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ಅಂಕಿತ
ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಅಗತ್ಯ ಸಂಖ್ಯಾಬಲದ ಕೊರತೆ ಇರುವ ಹಿನ್ನೆಲೆ ಸ್ಪೀಕರ್ ಮತ್ತು ಸಭಾಪತಿ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸೋದು ಡೌಟ್. ಹೀಗಾಗಿ ಎರಡೂ ಸ್ಥಾನಗಳಿಗೂ ಅವಿರೋಧ ಆಯ್ಕೆ ನಡೆಯುವ ಸಾಧ್ಯತೆಯೇ ಹೆಚ್ಚಾಗಿದೆ. ಇದನ್ನೂ ಓದಿ: ಮಹಿಳೆ ಅನುಮಾನಾಸ್ಪದ ಸಾವು – ಗಂಡನ ಮನೆಯ ಮುಂದೆ ಶವವಿಟ್ಟು ಪ್ರತಿಭಟನೆ
ಯಾವುದೇ ಕೊನೆಯ ಕ್ಷಣದ ಬದಲಾವಣೆಗಳು ಆಗದಿದ್ದರೆ, ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಜಿ.ಎಸ್. ಪಾಟೀಲ್ ಆಯ್ಕೆಯಾಗಲಿದ್ದಾರೆ. ಇನ್ನು ವಿಧಾನ ಪರಿಷತ್‌ನ ಸಭಾಪತಿ ಸ್ಥಾನಕ್ಕೆ ಸಲೀಂ ಅಹಮದ್ ಆಯ್ಕೆಯಾಗಲಿದ್ದಾರೆ. ಇದನ್ನೂ ಓದಿ: ದರ್ಶನ್‌ಗೆ ತಾತ್ಕಾಲಿಕ ರಿಲೀಫ್ – ಒಂದು ವಾರ ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸದಂತೆ ಕೋರ್ಟ್ ಸೂಚನೆ
ಆಗಸ್ಟ್ 14ರಂದು ನಡೆಯಲಿರುವ ಚುನಾವಣೆಯ ಬಳಿಕ ಎರಡೂ ಪ್ರಮುಖ ಸಾಂವಿಧಾನಿಕ ಹುದ್ದೆಗಳಿಗೆ ಹೊಸ ನೇಮಕಾತಿ ಅಧಿಕೃತವಾಗಲಿದೆ. ಆದರೆ ಚುನಾವಣೆಗೆ ಮುನ್ನ ರಾಜಕೀಯ ಬೆಳವಣಿಗೆಗಳಲ್ಲಿ ಯಾವುದೇ ಬದಲಾವಣೆ ಸಂಭವಿಸಿದರೆ ಅಂತಿಮ ಚಿತ್ರಣ ಬದಲಾಗುವ ಸಾಧ್ಯತೆಯೂ ಇದೆ. ಇದನ್ನೂ ಓದಿ: ಸುಪ್ರಿಯಾ ಸುಳೆ ಪುತ್ರಿಯ ರಿಸೆಪ್ಷನ್‌ನಲ್ಲಿ ಮೋದಿ, ಸೋನಿಯಾ, ಅಮಿತ್ ಶಾ, ರಾಗಾ ಸೇರಿ ಗಣ್ಯರು ಭಾಗಿ
ಸದ್ಯದ ಲೆಕ್ಕಾಚಾರದ ಪ್ರಕಾರ, ಬಿಜೆಪಿ ಹಾಗೂ ಜೆಡಿಎಸ್‌ಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸದಿದ್ದರೆ, ಸ್ಪೀಕರ್ ಮತ್ತು ಸಭಾಪತಿ ಸ್ಥಾನಗಳಿಗೆ ಕ್ರಮವಾಗಿ ಜಿ.ಎಸ್. ಪಾಟೀಲ್ ಹಾಗೂ ಸಲೀಂ ಅಹಮದ್ ಅವರು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು ಡಿಸಿ ಹೆಸರಲ್ಲಿ ಸೈಬರ್ ವಂಚಕರ ಗಾಳ – 50,000 ಹಣ ಕಳೆದುಕೊಂಡ ಆಹಾರ ಇಲಾಖೆ ಅಧಿಕಾರಿ

