ಲಕ್ನೋ: ಎಲೆಕ್ಟ್ರಿಕ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಜನರ ಮೇಲೆ ಹರಿದಿದೆ. ಈ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರಲ್ಲಿ ನಡೆದಿದೆ.
ವೇಗವಾಗಿ ಬಂದ ಬಸ್ ನಿಯಂತ್ರಣ ತಪ್ಪಿದೆ ಈ ವೇಳೆ ಮೂರು ಕಾರ್, ಹಲವು ಬೈಕ್ ಈ ಅಪಘಾತದಲ್ಲಿ ಜಖಂ ಆಗಿವೆ. ಇಷ್ಟೊಂದು ವೆಹಿಕಲ್‍ಗೆ ಗುದ್ದಿದ್ದು ಮಾತ್ರವಲ್ಲದೇ ಅಲ್ಲೆ ಪಕ್ಕದಲ್ಲಿ ಟ್ರಾಫಿಕ್ ಭೂತ್‍ಗೆ ನುಗ್ಗಿದೆ. ನಂತರ ಟ್ರಕ್‍ಗೆ ಗುದ್ದಿ ಬಸ್ ನಿಂತಿದೆ. 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳುಗಳನ್ನು ಅಲ್ಲಿಯೇ ಹತ್ತಿರದ ಆಸ್ಪತ್ರೆಗೆ ದಾಖಲಸಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement
#Police_Commissionerate_Kanpur_Nagar के घण्टाघर से टाटमील चौराहे के बीच हुयी घटना व की गयी कार्यवाही के सम्बन्ध में पुलिस उपायुक्त पूर्वी @dcpekanpur द्वारा दी गयी बाइट।@Uppolice pic.twitter.com/QpGho35a0M
— POLICE COMMISSIONERATE KANPUR NAGAR (@kanpurnagarpol) January 30, 2022
Advertisement
ಬಸ್ ಚಾಲಕನನ್ನು ಬಂಧಿಸಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಾನ್ಪುರದ ಉಪ ಪೊಲೀಸ್ ಆಯುಕ್ತ ಪ್ರಮೋದ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಅಸಮಾಧಾನ ಹೊರ ಹಾಕಿದ ಬೆನ್ನಲ್ಲೇ ಡಿಕೆಶಿಯನ್ನು ಭೇಟಿಯಾದ ಆನಂದ್ ಸಿಂಗ್
Advertisement
Advertisement
ಕಾನ್ಪುರದ ಬಾಬುಪುರ್ವಾ ಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದ ಬಗ್ಗೆ ತಿಳಿದು ತುಂಬಾ ದುಃಖವಾಗಿದೆ. ಇದರಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ತೀವ್ರ ಸಂತಾಪಗಳು. ಇದರೊಂದಿಗೆ ಈ ಅಪಘಾತದಲ್ಲಿ ಗಾಯಗೊಂಡಿರುವ ಎಲ್ಲರಿಗೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಫುಟ್‍ಪಾತ್ ಮೇಲೆ ಕಾರು ಚಾಲನೆ – ಅಪ್ರಾಪ್ತನ ಹುಚ್ಚಾಟಕ್ಕೆ ನಾಲ್ವರು ಬಲಿ
कानपुर से सड़क हादसे का बहुत ही दुखद समाचार प्राप्त हुआ।
मृतकों के परिजनों के प्रति मेरी गहरी शोक संवेदनाएं। मैं ईश्वर से प्रार्थना करती हूं कि घायलों को जल्द स्वास्थ्य लाभ मिले।
— Priyanka Gandhi Vadra (@priyankagandhi) January 30, 2022
ಕಾನ್ಪುರದ ರಸ್ತೆ ಅಪಘಾತದ ದುರದೃಷ್ಟಕರ ಸುದ್ದಿ ಬಂದಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.