ಬೆಂಗಳೂರು: ವಾಟರ್ ಹೀಟರ್‌ನಿಂದಾಗಿ (Water Heater) ವಿದ್ಯುತ್ ಶಾಕ್ (Current Shock) ತಗುಲಿ ತಾಯಿ (Mother) ಹಾಗೂ ಮಗು (Child) ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.
ತಾಯಿ ಜ್ಯೋತಿ ಹಾಗೂ ಆಕೆಯ 4 ವರ್ಷದ ಮಗು ಜಯಾನಂದ್ ವಿದ್ಯುತ್ ಶಾಕ್‌ನಿಂದ ಮೃತಪಟ್ಟವರು. ರಾಯಚೂರು ಮೂಲದ ಜ್ಯೋತಿ ತನ್ನ ಗಂಡ ಹಾಗೂ ಮಗನೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕನಕ ನಗರದಲ್ಲಿ ನೆಲೆಸಿದ್ದರು. ಆಕೆ ಹೊಟ್ಟೆಪಾಡಿಗಾಗಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಳು. ಇದನ್ನೂ ಓದಿ: ತಾನು ಚಿತ್ರ ಚೆನ್ನಾಗಿ ಬಿಡಿಸಲ್ಲ ಅಂತ ಕಲಾ ಪರೀಕ್ಷೆಗೆ ಅಣ್ಣನನ್ನು ಕೂರಿಸಿದ BA ವಿದ್ಯಾರ್ಥಿ
Advertisement
Advertisement
ಭಾನುವಾರ ಮಧ್ಯಾಹ್ನ ಸ್ನಾನಗೃಹದಲ್ಲಿ ನೀರು ಬಿಸಿ ಮಾಡಲು ಇಟ್ಟಿದ್ದ ವಾಟರ್ ಹೀಟರ್‌ನಿಂದ ಬಾಲಕ ಜಯಾನಂದ್‌ಗೆ ಕರೆಂಟ್ ಶಾಕ್ ತಗುಲಿತ್ತು. ಮಗುವಿಗೆ ಶಾಕ್ ತಗುಲಿ ಒದ್ದಾಡುತ್ತಿರುವುದನ್ನು ಕಂಡ ಜ್ಯೋತಿ ಆತನನ್ನು ಕಾಪಾಡಲು ಮುಂದಾದಾಗ ಆಕೆಗೂ ಕರೆಂಟ್ ಶಾಕ್ ತಗುಲಿದೆ. ಇದರಿಂದ ತಾಯಿ ಹಾಗೂ ಮಗು ಇಬ್ಬರೂ ದಾರುಣವಾಗಿ ಅಂತ್ಯ ಕಂಡಿದ್ದಾರೆ.
Advertisement
ಭಾನುವಾರ ಮಧ್ಯಾಹ್ನ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜ್ಯೋತಿ ಕುಟುಂಬ ಕೆಲ ದಿನಗಳ ಹಿಂದಷ್ಟೇ ರಾಯಚೂರಿನಿಂದ ಬೆಂಗಳೂರಿಗೆ ಬಂದಿತ್ತು. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದಿವರಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಕರ್ನಾಟಕಕ್ಕೆ ಅವಮಾನ, ಖರ್ಗೆಗೆ ಛತ್ರಿಯೇ ಸಿಗಲಿಲ್ಲ: ಮೋದಿ