Connect with us

Districts

ವಿದ್ಯುತ್ ತಂತಿ ತಗುಲಿ 9 ಲಕ್ಷ ರೂ. ಮೌಲ್ಯದ 9 ಎಕರೆ ಕಬ್ಬು ಬೆಂಕಿಗಾಹುತಿ

Published

on

ವಿಜಯಪುರ: ವಿದ್ಯುತ್ ತಂತಿ ತಗುಲಿದ ಪರಿಣಾಮ ಇಬ್ಬರು ರೈತರಿಗೆ ಸೇರಿದ್ದ ಒಂಭತ್ತು ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ.

ಉಮರಾಣಿ ಗ್ರಾಮದ ಕಸ್ತೂರಪ್ಪ ಮುತ್ತಪ್ಪ ಚಿಂಚೋಳಿ ಅವರಿಗೆ ಸೇರಿದ 6 ಎಕರೆ ಹಾಗೂ ಅಶೋಕ್ ಮುತ್ತಪ್ಪ ಚಿಂಚೋಳಿರಿಗೆ ಸೇರಿದ 3 ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿದೆ. ಮಾಹಿತಿಗಳ ಪ್ರಕಾರ ಫಸಲಿಗೆ ಬಂದಿದ್ದ ಬೆಳೆಗೆ ವಿದ್ಯುತ್ ತಂತಿ ತಗುಲಿದ್ದರ ಪರಿಣಾಮ 9 ಎಕರೆಯಲ್ಲಿ ಬೆಳೆದಿದ್ದ ಸುಮಾರು 9 ಲಕ್ಷ ರೂಪಾಯಿ ಮೌಲ್ಯದ ಕಬ್ಬು ಸಂಪೂರ್ಣ ಸುಟ್ಟುಹೋಗಿದೆ.

ಭೀಕರ ಬರದಲ್ಲಿ ಇಬ್ಬರೂ ರೈತರು ಕಷ್ಟಪಟ್ಟು ಕಬ್ಬಿನ ಬೆಳೆ ಬೆಳೆದಿದ್ದರು. ಆದರೆ ಫಸಲು ಕೈಗೆ ಬರುವ ಮುನ್ನವೇ, ಸುಟ್ಟು ಹೋಗಿದ್ದರಿಂದ ರೈತರಿಬ್ಬರೂ ಕಂಗಾಲಾಗಿ ಹೋಗಿದ್ದಾರೆ. ಈ ಬಗ್ಗೆ ಕೂಡಲೇ ಸೂಕ್ತ ಪರಿಹಾರಕ್ಕೆ ರೈತರು ಆಗ್ರಹಿಸಿದ್ದಾರೆ. ಘಟನೆ ಸಂಬಂಧ ಇಂಡಿ ತಾಲೂಕಿನ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Click to comment

Leave a Reply

Your email address will not be published. Required fields are marked *

www.publictv.in