ಕಾರವಾರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ದನದ ಕೊಟ್ಟಿಗೆಗೆ (Cowshed) ಬೆಂಕಿ ತಗುಲಿ 7 ಜಾನುವಾರುಗಳು ಸಜೀವ ದಹನಗೊಂಡ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಮುಂಡಗೋಡ ತಾಲೂಕಿನ ಹಳೂರಿನಲ್ಲಿ ನಡೆದಿದೆ.
ಮಂಜುನಾಥ್ ಶೇಟ್ ಅವರಿಗೆ ಸೇರಿದ ಜಾನುವಾರುಗಳು ಇದಾಗಿದ್ದು ತಡ ರಾತ್ರಿ ಆಕಸ್ಮಿಕವಾಗಿ ಆದ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕೊಟ್ಟಿಗೆಗೆ ಬೆಂಕಿ ತಗುಲಿ 4 ಆಕಳು, 3 ಕರುಗಳು ಸಾವನ್ನಪ್ಪಿವೆ. ಅಂದಾಜು 2.5 ಲಕ್ಷ ರೂ. ಮೌಲ್ಯದ ಜಾನುವಾರಗಳು ಇದಾಗಿತ್ತು ಎನ್ನಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮಳೆಯ ಆರ್ಭಟ – ವಿವಿಧೆಡೆ ಶಾಲಾ, ಕಾಲೇಜುಗಳಿಗೆ ರಜೆ
ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಮನೆಯಿಂದ ಕೊಟ್ಟಿಗೆ ದೂರ ಇರುವುದರಿಂದಾಗಿ ಮನೆಯವರು ಬೆಂಕಿ ಅನಾಹುತದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುಂದುವರೆದ ಮಳೆಯಾರ್ಭಟ – ಭೀಮಾ, ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹದ ಭೀತಿ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]