ಪಾಟ್ನಾ: ಶಾಲೆಯೊಂದರ ಗಣರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ ವಿದ್ಯುತ್ ಶಾಕ್‌ಗೆ ವಿದ್ಯಾರ್ಥಿ ಸಾವನ್ನಪ್ಪಿ ಹಲವು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬಿಹಾರದ ಬಕ್ಸಾರ್‌ನಲ್ಲಿರುವ ಶಾಲೆಯೊಂದರಲ್ಲಿ ನಡೆದಿದೆ.
ವರದಿಗಳ ಪ್ರಕಾರ ಅವಘಡದಿಂದಾಗಿ ವಿದ್ಯಾರ್ಥಿ ಸಾವನ್ನಪ್ಪಿದ್ದು, ನಾಲ್ವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಯರನ್ನು ವೈದ್ಯಕೀಯ ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ರಾಜಪಥದಲ್ಲಿ ಭಾರತದ ವೈಭವ ಅನಾವರಣ
Advertisement
Advertisement
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಮಾಜಿ ಸಚಿವ ಸಂತೋಷ್ ನಿರಾಳ ಹಾಗೂ ಕಾಂಗ್ರೆಸ್ ಶಾಸಕ ವಿಶ್ವನಾಥ್ ರಾಮ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ದುರ್ಘಟನೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಸದ್ಯ ಗಾಯಗೊಂಡಿದ್ದ ಮಕ್ಕಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ಯುವಕನನ್ನು ಶೀಘ್ರವೇ ಬಿಡುಗಡೆ ಮಾಡಲಿದೆ ಚೀನಾ