ಬೆಂಗಳೂರು: ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮಂಗಳವಾರ( ಅಕ್ಟೋಬರ್ 12) ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ(ಬೆಸ್ಕಾಂ) ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದೆ.
ರಾಜ್ಯಕ್ಕೆ ಕಲ್ಲಿದ್ದಲು ಪೂರೈಕೆಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಮಹಾರಾಷ್ಟ್ರದ ಚಂದ್ರಾಪುರ ಮತ್ತು ಒಡಿಶಾದ ಮಹಾನದಿ ಕೋಲ್‍ಫೀಲ್ಡ್ಸ್ ಲಿಮಿಟೆಡ್‍ನ ಗಣಿಗಳಿಂದ ಕರ್ನಾಟಕ ಕಲ್ಲಿದ್ದಲು ಹಂಚಿಕೆಯನ್ನು ಪಡೆದಿದ್ದು, ಕಾಯಲಾಗುತ್ತಿದೆ ಎಂದು ತಿಳಿಸಿದ್ದಾರೆ.
Advertisement
Advertisement
ಬೆಂಗಳೂರಿನಲ್ಲಿ ವಿದ್ಯುತ್ ಸ್ಥಗಿತಗೊಳಿಸುವ ಪ್ರದೇಶಗಳು:
ಜೆಪಿ ನಗರ 3 ನೇ ಹಂತ ಮತ್ತು ಜಯನಗರ ವಿಭಾಗದ ಬಿಜಿ ರಸ್ತೆ, ರಾಘವೇಂದ್ರ ಅಪಾರ್ಟ್‍ಮೆಂಟ್ ಮತ್ತು ಕೋರಮಂಗಲದ ಮುನ್ನೇಶ್ವರ ದೇವಸ್ಥಾನದಲ್ಲಿ ಮಧ್ಯಾಹ್ನ 1.30 ರಿಂದ 4 ರವರೆಗೆ ವಿದ್ಯುತ್ ಕಡಿತಗೊಳ್ಳಲಿದೆ. ಅದೇ ರೀತಿ, ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಬಿಕೆ ವೃತ್ತ, ಸುರಭಿ ನಗರ, ಹೊಸ ರಸ್ತೆ, ಕೋನಪ್ಪನ ಅಗ್ರಹಾರ ಮತ್ತು ಕ್ಲಬ್ ರಸ್ತೆ ವೃತ್ತ ಸೇರಿದಂತೆ ಎಚ್‍ಎಸ್‍ಆರ್ ಲೇಔಟ್ ವಿಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಮತ್ತು ಜಯನಗರ ವಿಭಾಗದ ಆರ್‍ಬಿಐ ಲೇಔಟ್, ಎಸ್‍ಬಿಎಂ ಕಾಲೋನಿ, ಹರಿ ನಗರ, ಈಶ್ವರ ಲೇಔಟ್ ಮತ್ತು ಶಿವಶಕ್ತಿ ನಗರಗಳಂತಹ ಪ್ರದೇಶಗಳು ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ದೀರ್ಘಾವಧಿಯ ವಿದ್ಯುತ್ ಕಡಿತವನ್ನು ಎದುರಿಸಬೇಕಾಗುತ್ತದೆ. ಇದನ್ನೂ ಓದಿ: ಮಾಜಿ ಸಚಿವ ವಿರುಪಾಕ್ಷಪ್ಪ ಅಗಡಿ ನಿಧನ
Advertisement
ಬೆಸ್ಕಾಂ ಗ್ರಾಹಕರ ಗಮನಕ್ಕೆ,
ದಿನಾಂಕ 12.10.2021 ರಂದು ದಕ್ಷಿಣ ವೃತ್ತದ ಜಯನಗರ, ಕೋರಮಂಗಲ ಹಾಗೂ ಹೆಚ್.ಎಸ್.ಆರ್ ಲೇಔಟ್ ವಿಭಾಗಗಳಲ್ಲಿ ಅಡಚಣೆ ಉಂಟಾಗಲಿದೆ.
ವಿದ್ಯುತ್ ಅಡಚಣೆಗಾಗಿ ವಿಷಾದಿಸುತ್ತೇವೆ. ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ https://t.co/ZvIS80aHNb ಸಂಪರ್ಕಿಸಿ. pic.twitter.com/N3cNDnELEt
— Namma BESCOM (ನಮ್ಮ ಬೆಸ್ಕಾಂ) (@NammaBESCOM) October 10, 2021
Advertisement
ಪಶ್ಚಿಮ ವಲಯಗಳಾದ ರಾಜಾಜಿನಗರ ವಿಭಾಗದ ಗೋವಿಂದರಾಜ್ ನಗರ, ಕೋಳಿಮನೆ ರಸ್ತೆ, ಸುಬಣ್ಣ ಗಾರ್ಡನ್, ಜಿಕೆಡಬ್ಲ್ಯೂ ಲೇಔಟ್, ವಿನಾಯಕ ಲೇಔಟ್, ಅನುಭವ ನಗರ, ಮಾರುತಿ ನಗರ, ಮತ್ತು ಗಂಗೊಂಡನ ಹಳ್ಳಿಯಲ್ಲಿ ಬೆಳಗ್ಗೆ 10.30 ರಿಂದ ಸಂಜೆ 5.30 ರವರೆಗೆ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಮತ್ತು ಆರ್.ಆರ್.ನಗರ ವಿಭಾಗದ ಎಚ್.ಬಿ.ಸಮಾಜ ರಸ್ತೆ ಮತ್ತು ರಂಗನಾಥ ಕಾಲೋನಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 6ರ ನಡುವೆ ವಿದ್ಯುತ್ ವ್ಯತ್ಯಯವಾಗಲಿದೆ. ಅದೇ ರೀತಿ, ಸಿರ್ಸಿ ವೃತ್ತದಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ಮತ್ತು ದ್ವಾರಕನಗರದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ವಿದ್ಯುತ್ ಕಡಿತವಾಗಲಿದೆ. ಕೆಂಗೇರಿ ವಿಭಾಗದ ಭೂಮಿಕಾ ಲೇಔಟ್, ಪತಂಗಿರಿ ಮತ್ತು ಕೃಷ್ಣಾ ಗಾರ್ಡನ್ ಕೂಡ ಮಂಗಳವಾರ ಬೆಳಗ್ಗೆ 9 ರಿಂದ ಸಂಜೆ 5ರ ನಡುವೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಇದನ್ನೂ ಓದಿ: ಕೆರೆ ನೋಡಲು ಬಂದವರಿಗೆ ಕೊರೊನಾ ವ್ಯಾಕ್ಸಿನ್
ಬೆಸ್ಕಾಂ ಗ್ರಾಹಕರ ಗಮನಕ್ಕೆ,
ದಿನಾಂಕ 12.10.2021 ರಂದು ಪಶ್ಚಿಮ ವೃತ್ತದ ರಾಜಾಜಿನಗರ, ಆರ್.ಆರ್ ನಗರ, ಕೆಂಗೇರಿ ವಿಭಾಗಗಳಲ್ಲಿ ಅಡಚಣೆ ಉಂಟಾಗಲಿದೆ.
ವಿದ್ಯುತ್ ಅಡಚಣೆಗಾಗಿ ವಿಷಾದಿಸುತ್ತೇವೆ. ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ https://t.co/ZvIS80aHNb ಸಂಪರ್ಕಿಸಿ. (1/2) pic.twitter.com/D50yX7Z3c4
— Namma BESCOM (ನಮ್ಮ ಬೆಸ್ಕಾಂ) (@NammaBESCOM) October 10, 2021
ಪೂರ್ವ ವಲಯಗಳಾದ ಇಂದಿರಾನಗರ ವಿಭಾಗದ ಹೊಯ್ಸಳ ನಗರ, 11 ನೇ ಕ್ರಾಸ್ ಮತ್ತು ಮೀನಾಕ್ಷಿ ದೇವಸ್ಥಾನ ರಸ್ತೆಯಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ಕಡಿತ ಇರುತ್ತದೆ. ಶಿವಾಜಿನಗರ ವಿಭಾಗದ ರಾಯಲ್ ಎನ್ಕ್ಲೇವ್ ಮತ್ತು ಪೊನಪ್ಪ ಲೇಔಟ್‍ನಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರ ನಡುವೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಅದೇ ರೀತಿ, ಭಾರತ್ ನಗರ ಮತ್ತು ಫಾತಿಮಾ ಲೇಔಟ್‍ನಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 3ರವರೆಗೆ ಮತ್ತು ದೂಪನಹಳ್ಳಿಯ ಕೆಲವು ಭಾಗಗಳಲ್ಲಿ ಮಧ್ಯಾಹ್ನ 2 ರಿಂದ 5 ರವರೆಗೆ ವಿದ್ಯುತ್ ಕಡಿತಗೊಳಿಸಲಾಗುತ್ತದೆ. ಅಲ್ಲದೇ ವಿಧಾನಸೌಧ ವಿಭಾಗದ ರಾಜಭವನ ಮತ್ತು ಮಾಗಡಿ ಮುಖ್ಯರಸ್ತೆಯಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಕನ್ನಿಂಗ್‍ಹ್ಯಾಮ್ ರಸ್ತೆ ಮತ್ತು ಮೈಸೂರು ರಸ್ತೆಯಲ್ಲಿ ಮಧ್ಯಾಹ್ನ 2.30 ರಿಂದ 5 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇದನ್ನೂ ಓದಿ: ತಾಯಿಯಾಗಿರುವ ವಿಚಾರ 2 ವರ್ಷಗಳ ನಂತ್ರ ಬಹಿರಂಗ ಪಡಿಸಿದ ಶ್ರಿಯಾ ಶರಣ್
ಬೆಸ್ಕಾಂ ಗ್ರಾಹಕರ ಗಮನಕ್ಕೆ,
ದಿನಾಂಕ 12.10.2021 ರಂದು ಪೂರ್ವ ವೃತ್ತದ ಇಂದಿರಾನಗರ್, ವೈಟ್ ಫೀಲ್ಡ್, ಶಿವಾಜಿನಗರ ಹಾಗೂ ವಿಧಾನಸೌಧ ವಿಭಾಗಗಳಲ್ಲಿ ಅಡಚಣೆ ಉಂಟಾಗಲಿದೆ.
ವಿದ್ಯುತ್ ಅಡಚಣೆಗಾಗಿ ವಿಷಾದಿಸುತ್ತೇವೆ. ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ https://t.co/ZvIS80aHNb ಸಂಪರ್ಕಿಸಿ. pic.twitter.com/cpDFAPtavu
— Namma BESCOM (ನಮ್ಮ ಬೆಸ್ಕಾಂ) (@NammaBESCOM) October 10, 2021
ಇನ್ನೂ ಉತ್ತರ ವಲಯಗಳಾದ ಹೆಬ್ಬಾಳ ವಿಭಾಗದ ಕೋಗಿಲು ಲೇಔಟ್, ಅಗ್ರಹಾರ ಮತ್ತು ತಿರುಮೇನಹಳ್ಳಿ ಗ್ರಾಮದ ನಿವಾಸಿಗಳು ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ವಿದ್ಯುತ್ ಕಡಿತದ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಇದೇ ರೀತಿಯ ಅಡೆತಡೆಗಳನ್ನು ಬಾಗಲೂರು ಕ್ರಾಸ್‍ನಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಮತ್ತು ಎಂಎಲ್‍ಎ ಲೇಔಟ್ ಅನ್ನು ಬೆಳಗ್ಗೆ 11 ರಿಂದ ಸಂಜೆ 5 ರವರೆಗೆ ವಿದ್ಯುತ್ ಸ್ಥಗಿತಗೊಳಿಸಲು ಸಮಯ ನಿಗದಿಪಡಿಸಲಾಗಿದೆ. ಇದನ್ನೂ ಓದಿ: ನಮ್ಗೆ ಲಸಿಕೆ ಕೊಡ್ಬೇಡಿ, ನಮ್ಮ ಮೇಲೆ ದೇವರು ಬಂದಿದ್ದಾರೆ – ಯಾದಗಿರಿಯಲ್ಲಿ ಹೈಡ್ರಾಮಾ
ಬೆಸ್ಕಾಂ ಗ್ರಾಹಕರ ಗಮನಕ್ಕೆ,
ದಿನಾಂಕ 12.10.2021 ರಂದು ಉತ್ತರ ವೃತ್ತದ ಮಲ್ಲೇಶ್ವರಂ, ಜಾಲಹಳ್ಳಿ, ಹೆಬ್ಬಾಳ ಹಾಗೂ ಪೀಣ್ಯ ವಿಭಾಗಗಳಲ್ಲಿ ಅಡಚಣೆ ಉಂಟಾಗಲಿದೆ.
ವಿದ್ಯುತ್ ಅಡಚಣೆಗಾಗಿ ವಿಷಾದಿಸುತ್ತೇವೆ. ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ https://t.co/ZvIS80aHNb ಸಂಪರ್ಕಿಸಿ. pic.twitter.com/gcrXjXYrsq
— Namma BESCOM (ನಮ್ಮ ಬೆಸ್ಕಾಂ) (@NammaBESCOM) October 10, 2021
ಅದೇ ರೀತಿ, ಪೀಣ್ಯ ವಿಭಾಗದಲ್ಲಿ ಪೈಪ್‍ಲೈನ್ ರಸ್ತೆ, ಪ್ರಶಾಂತನಗರ ಸುತ್ತಮುತ್ತ, ಎಂಟಿಎಸ್ ಕಾಲೋನಿ, ಎಜಿಬಿಜಿ ಲೇಔಟ್, ಜಿಡಿ ನಾಯ್ಡು ಹಾಲ್ ರಸ್ತೆ ಮತ್ತು ಎಂಎಲ್ ಲೇಔಟ್ (ಮತ್ತಷ್ಟು ವಿಸ್ತರಣೆ) ಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಲ್ಲೇಶ್ವರ ವಿಭಾಗದ ಗಾಯತ್ರಿನಗರ ಮತ್ತು ಇ-ಬ್ಲಾಕ್ ರಾಜಾಜಿನಗರದಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರ ನಡುವೆ ವಿದ್ಯುತ್ ಕಡಿತವಾಗಲಿದ್ದು, ಇದೇ ರೀತಿಯ ಸ್ಥಗಿತವನ್ನು ಎಚ್‍ಎಂಟಿ ಲೇಔಟ್‍ಗೆ ಬೆಳಗ್ಗೆ 10.30 ರಿಂದ ಸಂಜೆ 6 ರವರೆಗೆ ನಿಗದಿಪಡಿಸಲಾಗಿದೆ.