ಬೆಂಗಳೂರು: ಪೆಟ್ರೋಲ್, ಡೀಸೆಲ್, ಗ್ಯಾಸ್ ಆಯಿತು. ಇದೀಗ ವಿದ್ಯುತ್ ದರ ಏರಿಕೆ ಸರದಿ. ರಾಜ್ಯದಲ್ಲಿ ಜುಲೈ 1 ರಿಂದ ಮತ್ತೆ ವಿದ್ಯುತ್ ದರ ಏರಿಕೆಯಾಗಲಿದೆ.
Advertisement
ಹೌದು, ಬೆಲೆ ಏರಿಕೆ ಬಿಸಿ ನಡುವೆ ರಾಜ್ಯ ಸರ್ಕಾರ ಜನರಿಗೆ ವಿದ್ಯುತ್ ದರ ಏರಿಕೆ ಶಾಕ್ ನೀಡಿದೆ. ಜುಲೈ 1 ರಿಂದ ವಿದ್ಯುತ್ ದರ 19 ರೂಪಾಯಿಯಿಂದ 31 ರವರೆಗೆ ಹೆಚ್ಚಾಗಲಿದೆ. ಪ್ರತಿ ತಿಂಗಳು 100 ಯೂನಿಟ್ ಬಳಸುವ ಗ್ರಾಹಕರು, ಇನ್ಮುಂದೆ ಹೆಚ್ಚುವರಿಯಾಗಿ 19 ರೂಪಾಯಿಂದ 31 ರೂಪಾಯಿ ಪಾವತಿಸಬೇಕು. ಇದನ್ನೂ ಓದಿ: ಬಿಎಸ್ ಯಡಿಯೂರಪ್ಪ ಇಂಗ್ಲೆಂಡ್ ಪ್ರವಾಸ 8 ದಿನ ವಿಸ್ತರಣೆ
Advertisement
Advertisement
ಕಳೆದ 2 ವರ್ಷಗಳಲ್ಲಿ ಕಲ್ಲಿದ್ದಲು ದರ ಹೆಚ್ಚಳವಾಗಿರುವ ಹಿನ್ನೆಲೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ)ಕ್ಕೆ ಎಸ್ಕಾಂಗಳು (ಬೆಸ್ಕಾಂ, ಮೆಸ್ಕಾಂ, ಹೆಸ್ಕಾಂ, ಗೆಸ್ಕಾಂ, ಸೆಸ್ಕ್ ನಿಂದ ಪ್ರಸ್ತಾವ ಸಲ್ಲಿಸಲು ಅನುಮೋದಿಸಲಾಗಿತ್ತು. ಇದನ್ನೂ ಓದಿ: ಮೇಲಧಿಕಾರಿ ವಿರುದ್ಧ ತಿರುಗಿಬಿದ್ದ ಕಾನ್ಸ್‌ಟೇಬಲ್ – ವಿಧಾನಸೌಧದ ಭದ್ರತಾ DCP ವಿರುದ್ಧ ದೂರು
Advertisement
ಎಸ್ಕಾಂಗಳು ಎಷ್ಟು ದರ ಹೆಚ್ಚಳಕ್ಕೆ ಪ್ರಸಾವ ಸಲ್ಲಿಸಿತ್ತು?
* ಪ್ರತಿ ಯೂನಿಟ್‍ಗೆ 38 ರಿಂದ 55 ರೂ. ವಸೂಲಿ ಮಾಡಲು ಎಸ್ಕಾಂಗಳು ಕೋರಿದ್ದವು
* ಬೆಸ್ಕಾಂ – 55.28
* ಮೆಸ್ಕಾಂ – 38.98
* ಸೆಸ್ಕ್ – 40.47
* ಹೆಸ್ಕಾಂ – 49.54
* ಗೆಸ್ಕಾಂ – 39.36 ಹೆಚ್ಚಿಸಲು ನಿರ್ಧರಿಸಿದ್ದವು
ವಿದ್ಯುತ್ ದರ ಹೆಚ್ಚಳಕ್ಕೆ ಕಾರಣ ಏನು?
* ಶಾಖೋತ್ಪನ್ನ ವಿದ್ಯುತ್ ಘಟಕಗಳಲ್ಲಿ ಉತ್ಪಾದನೆಯ ವೆಚ್ಚ ಹೆಚ್ಚಾಗಿದೆ
* ಕಲ್ಲಿದ್ದಲು, ಅಭಾವ ಹಾಗೂ ದರ ಹೆಚ್ಚಳವಾಗಿದೆ
* ಆರ್ಥಿಕವಾಗಿ ನಷ್ಟದಲ್ಲಿರುವ ಎಸ್ಕಾಂಗಳು. ತಾತ್ಕಲಿಕ ಮಟ್ಟಕ್ಕೆ ದರ ಹೆಚ್ಚು ಮಾಡಲಾಗಿದೆ