ಮುಂಬೈ: ವಿದ್ಯುತ್ ಬಿಲ್ ಪಾವತಿಸದೇ ಇದ್ದರೆ ವಿದ್ಯುತ್ ಪೂರೈಕೆಯನ್ನು ಕಡಿತಗೊಳಿಸಲಾಗುತ್ತದೆ ಎಂದು ಮಹಾರಾಷ್ಟ್ರದ ಇಂಧನ ಸಚಿವ ನಿತಿನ್ ರಾವತ್ ಹೇಳಿದ್ದಾರೆ.
ಕೊರೊನಾ ಲಾಕ್‍ಡೌನ್ ಸಮಯದಲ್ಲಿ ಜನರು ಮನೆಯಲ್ಲಿದ್ದ ಕಾರಣ ವಿದ್ಯುತ್ ಬಿಲ್ ನಿಧಾನವಾಗಿ ಪಾವತಿಸಬಹುದು ಎಂದು ಕೇಂದ್ರ ಸರ್ಕಾರ ಸೂಚಿಸಿತ್ತು. ಈ ವೇಳೆ ವಿದ್ಯುತ್ ಇಲಾಖೆ ನೌಕರರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಕೆಲಸ ಮಾಡಿದ್ದಾರೆ. ಆದರೆ ಲಾಕ್‍ಡೌನ್ ಮುಗಿದ ನಂತರ ಕೂಡ ಅನೇಕ ಜನರು ವಿದ್ಯುತ್ ಬಿಲ್ ಪಾವತಿಸಿಲ್ಲ. ಹೀಗಾಗಿ ವಿದ್ಯುತ್ ಬಿಲ್ ಪಾವತಿಸದೇ ಇದ್ದರೆ ವಿದ್ಯುತ್ ಪೂರೈಕೆಯನ್ನು ಕಡಿತಗೊಳಿಸಲಾಗುತ್ತದೆ ಎಂದು ನಿತಿನ್ ರಾವತ್ ಬೆದರಿಕೆಯೊಡ್ಡಿದ್ದಾರೆ. ಇದನ್ನೂ ಓದಿ: ಭಾರತೀಯರನ್ನು ತಾಯ್ನಾಡಿಗೆ ತರುವ ಪ್ರಾಮಾಣಿಕ ಪ್ರಯತ್ನವನ್ನು ಮೋದಿ ಸರ್ಕಾರ ಮಾಡುತ್ತಿದೆ: ಖೂಬಾ
ಅಕೋಲಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಮಗಾಗಿ ಹೀಗೆ ಮಾಡಿ, ನಮಗಾಗಿ ಹಾಗೆ ಮಾಡಿ ಎನ್ನುತ್ತಾರೋ ಹೊರತು ವಿದ್ಯುತ್ ಬಿಲ್ ಕಟ್ಟುವುದಿಲ್ಲ. ಹಾಗಾಗಿ ಅವರ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತೇವೆ. ವಿದ್ಯುತ್ ಉಚಿತವಾಗಿ ಪೂರೈಸಲು ಸಾಧ್ಯವಿಲ್ಲ ಎಂದಿದ್ದಾರೆ. ರಾಜ್ಯದಲ್ಲಿ ರೈತರು ವಿದ್ಯುತ್ ಬಿಲ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಬಿಲ್‍ಗಳನ್ನು ಸಮಯಕ್ಕೆ ಸರಿಯಾಗಿ ಪಾವತಿಸದಿದ್ದರೆ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಲಾಗುತ್ತದೆ.
ಲಾಕ್‍ಡೌನ್ ವೇಳೆ ನೀವು ಮನೆಯಲ್ಲಿ ಕುಳಿತಿರುವಾಗ, ನಿಮಗಾಗಿ ವಿದ್ಯುತ್ ಇಲಾಖೆ ನೌಕರರು ಹಗಲು ರಾತ್ರಿ ಕೆಲಸ ಮಾಡುತ್ತಿದ್ದರು. ನೀವು ರೆಫ್ರಿಜರೇಟರ್‌ಗಳು, ಕೂಲರ್‌ಗಳು, ಟಿವಿಗಳು, ಲ್ಯಾಪ್‍ಟಾಪ್‍ಗಳನ್ನು ಬಳಸಿದ್ದೀರಿ ಮತ್ತು ನಾವು ನಿಮಗೆ 24-ಗಂಟೆಗಳ ಕಾಲವಿದ್ಯುತ್ ಪೂರೈಕೆ ಮಾಡಿದ್ದೇವೆ. ನಮ್ಮ ಅನೇಕ ನೌಕರರು ಹಗಲು, ರಾತ್ರಿ ರಸ್ತೆಯಲ್ಲಿದ್ದರು ಮತ್ತು ಅವರಲ್ಲಿ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಂಠೀರವ ಸ್ಟುಡಿಯೋ ಆವರಣದಲ್ಲಿ 14 ಅಡಿ ಎತ್ತರದ ಅಂಬರೀಶ್ ಪ್ರತಿಮೆ